ಶ್ರೀನಗರ : ದಶಕಗಳ ನಂತರ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಬುಧವಾರ ಆರಂಭವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಈ ಹಂತದಲ್ಲಿ ಪೀರ್ ಪಂಜಾಲ್ ಪರ್ವತ ಶ್ರೇಣಿಯ ಎರಡೂ ಬದಿಯಲ್ಲಿರುವ ಶ್ರೀನಗರ, ಬುದ್ಗಾಮ್, ರಾಜೌರಿ, ಪೂಂಚ್, ಗಂದರ್ಬಾಲ್ ಮತ್ತು ರಿಯಾಸಿ ಸೇರಿದಂತೆ ಒಟ್ಟು 26 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 25.78 ಲಕ್ಷ ಮತದಾರರು, 239 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.ಚುನಾವಣೆಯಲ್ಲಿ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ನಾಯಕ ಸರ್ಜನ್ ಅಹ್ಮದ್ ವೇಜ್ ಅಲಿಯಾಸ್ ಬರ್ಕತಿ ಬೀರವಾ ಮತ್ತು ಗಂದರ್ಬಲ್ ಎರಡೂ ಕ್ಷೇತ್ರಗಳಿಂದ ಸ್ಪರ್ಧೆಗಿಳಿದಿರುವುದು ವಿಶೇಷವಾಗಿದೆ.