20 ಕ್ಕೂ ಅಧಿಕ ಮಂದಿಗೆ ಗಾಯ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬೆಳಗಾವಿ: ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್​ ಏಕಾಏಕಿ ಬ್ರೇಕ್ ಫೇಲ್​ ಆಗಿ ಪಲ್ಟಿಯಾಗಿದೆ.ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದರೆ, 20 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಎಲ್ಲಾ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಪಲ್ಟಿಯಾಗಿದ್ದ ತಡ ಸ್ಥಳಕ್ಕೆ ಸ್ಥಳೀಯ ನಿವಾಸಿಗಳು ಓಡೋಡಿ ಬಂದು ಬಸ್​ನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಬಸ್‌ ಒಳಗೆ ಸಿಲುಕಿಕೊಂಡವರನ್ನು ಹೊರಕ್ಕೆ ತೆಗೆದು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಕಿತ್ತೂರು ಠಾಣೆ ಪೊಲೀಸರು ತಕ್ಷಣ ಸ್ಥಳಕ್ಕೆ ಭೆಟಿ ನೀಡಿದ್ದು, ಪರಶೀಲನೆ ನಡೆಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *