4 ಕೋಟಿಗೆ ಏರಿದ ರಶ್ಮಿಕಾ ಮಂದಣ್ಣ ಇನ್​ಸ್ಟಾಗ್ರಾಮ್​ ಫಾಲೋವರ್ಸ್​

ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಗುರುತಿಸಿಕೊಂಡಿರುವ ರಶ್ಮಿಕಾ ಮಂದಣ್ಣ ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ಅವರನ್ನು ಹಿಂಬಾಲಿಸುವವರ ಸಂಖ್ಯೆ ದೊಡ್ಡದಾಗುತ್ತಲೇ ಇದೆ. ಇನ್​ಸ್ಟಾಗ್ರಾಮ್​ನಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ಬರೋಬ್ಬರಿ 40 ಮಿಲಿಯನ್​, ಅಂದರೆ 4 ಕೋಟಿ ಜನರು ಫಾಲೋ ಮಾಡುತ್ತಿದ್ದಾರೆ.

ಇದರ ಜೊತೆ ‘ಅನಿಮಲ್​’ ಸಿನಿಮಾ ಕೂಡ ಗೆದ್ದಿರುವುದು ನಟಿಯ ಪಾಲಿಗೆ ಡಬಲ್​ ಖುಷಿ ನೀಡಿದೆ.

ಬಾಲಿವುಡ್​ನಲ್ಲಿ ಅಮಿತಾಭ್​ ಬಚ್ಚನ್​ ಜೊತೆ ‘ಗುಡ್​ಬೈ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ತೆರೆ ಹಂಚಿಕೊಂಡರು. ನಂತರ ‘ಮಿಷನ್​ ಮಜ್ನು’ ಸಿನಿಮಾದಲ್ಲಿ ಸಿದ್ದಾರ್ಥ್​ ಮಲ್ಹೋತ್ರಾಗೆ ಜೋಡಿಯಾಗಿ ಅವರು ಅಭಿನಯಿಸಿದರು.

ಈಗ ರಣಬೀರ್​ ಕಪೂರ್​ ಜೊತೆ ‘ಅನಿಮಲ್​’ ಸಿನಿಮಾದಲ್ಲಿ ನಟಿಸಿ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಜೊತೆಗೆ ರಶ್ಮಿಕಾ ಮಂದಣ್ಣ ಅವರ ಫಾಲೋವರ್ಸ್​ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ.

https://www.instagram.com/p/C0V26aKp8Kg/?utm_source=ig_web_button_share_sheet&igshid=MzRlODBiNWFlZA==

Font Awesome Icons

Leave a Reply

Your email address will not be published. Required fields are marked *