ಬೆಂಗಳೂರು: ಕರ್ನಾಟಕದಲ್ಲಿ ನಿಫಾ ಭೀತಿ ಶುರುವಾಗಿದೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವಕ ಇತ್ತೀಚೆಗೆ ಕೇರಳದಲ್ಲಿ ನಿಫಾಗೆ ಸಾವನ್ನಪ್ಪಿದ್ದ. ಇದೀಗ ಆತನ ಅಂತ್ಯಸಂಸ್ಕಾರಕ್ಕೆ ತೆರಳಿದ್ದ 41 ಸಂಪರ್ಕಿತರು ಪತ್ತೆ ಆಗಿದ್ದು, 41 ಜನರಿಗೂ ಕಡ್ಡಾಯ ಕ್ವಾರಂಟೈನ್ ಹಾಗೂ ಐಸೋಲೇಷನ್ಗೆ ಆರೋಗ್ಯ ಇಲಾಖೆ ಒಳಪಡಿಸಿದೆ.
ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾ ವಹಿಸಿದ್ದು, 41 ಸಂಪರ್ಕಿತರ ಪೈಕಿ ಒಬ್ಬರಿಗೆ ನಿಫಾ ಗುಣಲಕ್ಷಣಗಳು ಕಂಡುಬಂದಿವೆ. ಗುಣಲಕ್ಷಣಗಳಿರುವ ವ್ಯಕ್ತಿಯ ರಕ್ತ ಮತ್ತು ಸೆರಂ ಮಾದರಿ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದ್ದು, ಸದ್ಯ ವ್ಯಕ್ತಿಯ ಆರೋಗ್ಯ ಸ್ಥಿರವಾಗಿದೆ. ಸದ್ಯ ರಾಜ್ಯದಲ್ಲಿ ಯಾವ ನಿಫಾ ಕೇಸ್ ಕೂಡ ದಾಖಲಾಗಿಲ್ಲ.