98 ಕೋಟಿ ರೂ. ಮೌಲ್ಯದ ಮದ್ಯ ವಶ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಚಾಮರಾಜನಗರ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗಲೇ ಕೋಟ್ಯಾಂತರ ರೂ.  ಮೌಲ್ಯದ ಮದ್ಯ ದಾಸ್ತಾನಿಟ್ಟಿರುವುದು ಬೆಳಕಿಗೆ ಬಂದಿದ್ದು, ಜನ ಬೆಚ್ಚಿ ಬೀಳುವಂತೆ ಮಾಡಿದೆ. ಈ ಮದ್ಯವನ್ನು ಯಾವ ಉದ್ದೇಶಕ್ಕಾಗಿ ಶೇಖರಿಸಿಡಲಾಗಿತ್ತು ಎಂಬುದು ಸಂಶಯಕ್ಕೆ ಕಾರಣವಾಗಿದೆ.

ಅಬಕಾರಿ ಅಧಿಕಾರಿಗಳು ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ‌ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ  ಇಮ್ಮಾವು ಬಳಿ ದಾಸ್ತಾನಿಗಿಂತ ಹೆಚ್ಚುವರಿಯಾಗಿ ಶೇಖರಿಸಿಟ್ಟಿದ್ದ 98 ಕೋಟಿ ರೂ.ಗೂ ಹೆಚ್ಚು ಮೊತ್ತದ ಮದ್ಯವನ್ನು ವಶ ಪಡಿಸಿಕೊಂಡಿದ್ದಾರೆ.

ಪ್ರಕರಣದಲ್ಲಿ 17 ಆರೋಪಿಗಳನ್ನು ಗುರುತಿಸಲಾಗುದ್ದು, ಅವರೆಲ್ಲರೂ ತಲೆ ಮರೆಸಿಕೊಂಡಿದ್ದು, ಅವರುಗಳ ಬಂಧನಕ್ಕೆ  ಜಿಲ್ಲಾಧಿಕಾರಿಗಳ ಅನುಮತಿ ಕೋರಿದ್ದಾರೆ. ನಂಜನಗೂಡು ತಾಲ್ಲೂಕು ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಮಾದರಿ ನೀತಿ ಸಂಹಿತೆ ವ್ಯಾಪ್ತಿಗೆ ಬರುವ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲಾ ಚುನಾವಣಾಧಿಕಾರಿಗಳ ಅನುಮತಿ ಕೋರಿದ್ದಾರೆ.

Font Awesome Icons

Leave a Reply

Your email address will not be published. Required fields are marked *