ಮಕ್ಕಳೊಂದಿಗೆ ದೀಪಾವಳಿಯನ್ನು ಆಚರಿಸಿದ ನಟಿ ರಾಧಿಕಾ ಪಂಡಿತ್

ಬೆಂಗಳೂರು: ಅನೇಕ ಸೆಲೆಬ್ರಿಟಿಗಳೂ ಕುಟುಂಬದ ಜೊತೆ ದೀಪಾವಳಿ ಆಚರಿಸುತ್ತಿದ್ದಾರೆ. ನಟಿ ರಾಧಿಕಾ ಪಂಡಿತ್ ಕೂಡಾ ಈ ಬಾರಿ ತಮ್ಮ ಕುಟುಂಬದ ಜೊತೆ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ತೊಡಗಿಕೊಂಡಿದ್ದು, ತಮ್ಮ ಮುದ್ದು ಮಕ್ಕಳ ಜೊತೆಗೆ ಹಬ್ಬವನ್ನು ಆಚರಿಸುತ್ತಿರುವ ಪೋಟೊವನ್ನು ಹಂಚಿಕೊಂಡಿದ್ದಾರೆ.

radhik k

ಈ ಫೋಟೋದಲ್ಲಿ ಅವರು ಮಕ್ಕಳು ಹಾಗೂ ಆಪ್ತರ ಜೊತೆ ಕಾಣಿಸಿಕೊಂಡಿದ್ದಾರೆ. ದೀಪ ಬೆಳಗಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ರಾಧಿಕಾ ಪಂಡಿತ್ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದರು,ಅವರು ಅಭಿಮಾನಿಗಳಿಂದ ದೂರ ಆಗಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಆಗಾಗ ಫೋಟೋ ಹಂಚಿಕೊಳ್ಳುತ್ತಾರೆ.

radhik f

‘ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು. ನಿಮ್ಮ ಬಾಳಿನಲ್ಲಿ ಕತ್ತಲೆ ಕಳೆದು ಬೆಳಕು ಮೂಡಲಿ ಎಂದು ಹಾರೈಸುತ್ತೇನೆ’ ಎಂದು ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಕೂಡ ಪೋಸ್ ನೀಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

Font Awesome Icons

Leave a Reply

Your email address will not be published. Required fields are marked *