ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಭೇಟಿಯಾಗಿ ಮಾತುಕತೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ. – Just Kannada | Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್




ಬೆಂಗಳೂರು,ನವೆಂಬರ್,13,2023(www.justkannada.in): ಬಿಜೆಪಿ ನೂತನ ರಾಜ್ಯಾಧ್ಯಕ್ಷರಾದ ನಂತರ ಹಿರಿಯ ನಾಯಕರನ್ನ ಭೇಟಿಯಾಗುತ್ತಿರುವ ಬಿವೈ ವಿಜಯೇಂದ್ರ ಅವರು ಇದೀಗ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಪದ್ಮನಾಭನಗರದಲ್ಲಿರುವ ಹೆಚ್​.ಡಿ.ದೇವೇಗೌಡರ ನಿವಾಸದಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ಬಿವೈ ವಿಜಯೇಂದ್ರ 20 ನಿಮಿಷದಿಂದ ಮಾತುಕತೆ ನಡೆಸಿದ್ದಾರೆ. ಪ್ರಸ್ತುತ ರಾಜ್ಯ ರಾಜಕೀಯದ ಬಗ್ಗೆ ವಿಜಯೇಂದ್ರ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾಗಿದ್ದರು.  ಬಳಿಕ ಮಾತನಾಡಿದ್ದ ಬಿವೈ ವಿಜಯೇಂದ್ರ, ಬಸವರಾಜ ಬೊಮ್ಮಾಯಿ ಆಶೀರ್ವಾದ ಹಾಗೂ ಮಾರ್ಗದರ್ಶನ ಕೇಳಿದ್ದೇನೆ. ವರಿಷ್ಠರು ಒಳ್ಳೇ ನಿರ್ಧಾರ ಮಾಡಿದ್ದಾರೆ ಎಂದು ಸಂತೋಷಪಟ್ಟರು. ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದಕ್ಕೆ ದೊಡ್ಡ ಶಕ್ತಿ ಬಂದಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ನಾನಷ್ಟೇ ಅಲ್ಲ, ಎಲ್ಲಾ ಹಿರಿಯರು ನಿನ್ನ ಜತೆ ಇರುತ್ತೇವೆ ಎಂದಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸಬೇಕಿದೆ. ಪ್ರವಾಸ ಮಾಡಿ ಪಕ್ಷಕ್ಕೆ ಬಲ ತುಂಬುವ ಕೆಲಸ ಮಾಡೋಣ ಎಂದು ಬೊಮ್ಮಾಯಿ ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.

Key words: BJP State President- BY Vijayendra- met -former Prime Minister -HD Deve Gowda.






Previous articleಪಟಾಕಿ ಅವಘಡ ಹಿನ್ನೆಲೆ: ಸಾರ್ವಜನಿಕರು ನಮಗೆ ಸಹಕರಿಸಿ –ಗೃಹ ಸಚಿವ ಪರಮೇಶ್ವರ್ ಮನವಿ.


Font Awesome Icons

Leave a Reply

Your email address will not be published. Required fields are marked *