ಬೆಂಗಳೂರು: ಈ ಬಾರಿಯ ಬಿಗ್ ಬಾಸ್ ಪೊಲೀಸ್ ಸ್ಟೇಶನ್ನಲ್ಲಿಯೇ ನಡೆಯುತ್ತಿದೆ ಎಂದರೆ ತಪ್ಪಾಗಲಾರದು. ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಸ್ಪರ್ಧಿ ತನಿಷಾ ಮೇಲಿನ ಪ್ರಕರಣದ ತನಿಖೆಯನ್ನು ಮಾಗಡಿ ಪೊಲೀಸರು ಚುರುಕುಗೊಳಿಸಿದ್ದಾರೆ. ಈ ಪ್ರಕರಣದ ಕುರಿತಂತೆ ರಾಮನಗರ ಎಸ್ಪಿ ಮಾತನಾಡಿ, ‘ತನಿಷಾ ಅವರ ಮಾತನಾಡಿದ್ದಾರೆ ಎನ್ನಲಾದ ವಿಡಿಯೋವನ್ನು ಎಫ್.ಎಸ್.ಎಲ್ ಕಳುಹಿಸಲಾಗಿದೆ. ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. ಮಾಗಡಿ ಡಿವೈಎಸ್ಪಿ ಪ್ರವೀಣ್ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ವರದಿಗಾಗಿ ಕಾಯುತ್ತಿದ್ದಾರೆ.
ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಷಾ ಮೇಲಿನ ಪ್ರಕರಣದ ತನಿಖೆಯನ್ನು ಮಾಗಡಿ ಪೊಲೀಸರು ಚುರುಕುಗೊಳಿಸಿದ್ದಾರೆ. ಈ ಪ್ರಕರಣದ ಕುರಿತಂತೆ ರಾಮನಗರ ಎಸ್ಪಿ ಮಾತನಾಡಿ, ‘ತನಿಷಾ ಅವರ ಮಾತನಾಡಿದ್ದಾರೆ ಎನ್ನಲಾದ ವಿಡಿಯೋವನ್ನು ಎಫ್.ಎಸ್.ಎಲ್ ಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. ಮಾಗಡಿ ಡಿವೈಎಸ್್ಪಿ ಪ್ರವೀಣ್ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ವರದಿಗಾಗಿ ಕಾಯುತ್ತಿದ್ದಾರೆ.
ಈ ನಡುವೆ ತನಿಷಾ ಕುಪ್ಪಂಡ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಸದ್ಯ ಬಿಗ್ ಬಾಸ್ ಮನೆಯಲ್ಲಿರುವ ನಟಿ ಮೇಲೆ ಜಾತಿ ನಿಂದನೆ ವಿಚಾರವಾಗಿ ಎಸ್ಸಿಎಸ್ಟಿ ಕಾಯ್ದೆಯಡಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದ್ದಾರೆ. ಈ ಹಿಂದೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.