ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಮತ್ತು ರಾಮ ಮಂದಿರ ನಿರ್ಮಾಣದ ಟ್ರಸ್ಟ್ ಇಂದು ಆಹ್ವಾನ ನೀಡಿದೆ.
ಈ ಬಗ್ಗೆ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಟ್ವೀಟ್ ಮಾಡಿದ್ದು, ರಾಮ ಮಂದಿರ ನಿರ್ಮಾಣದ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಕೊಡಗೆ ಇದೆ. ಈ ಮೂವರಿಗೆ ಆಹ್ವಾನ ನೀಡಲಾಗಿದೆ. ಆಹ್ವಾನವನ್ನು ಸ್ವೀಕರಿಸಿದ ಜೆಪಿ ನಡ್ಡಾ ಅವರು ಕಾರ್ಯಕ್ರಮಕ್ಕೆ ಆಗಮಿಸುವುದಾಗಿ ಹೇಳಿದ್ದಾರೆ ಎಂದು ಹೇಳಿದೆ.
ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಅವರು ಮಂದಿರ ನಿರ್ಮಾಣ ಕಾರ್ಯ ಮತ್ತು ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮದ ಬಗ್ಗೆ ಅಪಾರ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾಗಿ ಟ್ವೀಟ್ನಲ್ಲಿ ವಿಎಚ್ಪಿ ತಿಳಿಸಿದೆ.
भारतीय जनता पार्टी के राष्ट्रीय अध्यक्ष श्री जगत प्रकाश नड्डा, भारत के रक्षा मंत्री व उत्तर प्रदेश के पूर्व मुख्यमंत्री श्री राजनाथ सिंह और भारत के गृह मंत्री एवं जिनका राम मंदिर की वर्तमान स्थिति लाने में महत्वपूर्ण योगदान है श्री अमित शाह को 22 जनवरी को श्री राम मंदिर की प्राण… pic.twitter.com/ELVpn9l6KG
— Vishva Hindu Parishad -VHP (@VHPDigital) January 13, 2024