ಪೊಂಗಲ್‌  ಸಂಭ್ರಮಾಚರಣೆ: ಗಾಯನ ಪ್ರಸ್ತುತಪಡಿಸಿದ ಬಾಲಕಿಗೆ ಉಡುಗೊರೆ ನೀಡಿದ ಪ್ರಧಾನಿ

ನವದೆಹಲಿ: ಕೇಂದ್ರ ರಾಜ್ಯ ಸಚಿವ ಎಲ್‌.ಮುರುಗನ್‌ ಅವರ ನಿವಾಸದಲ್ಲಿ ಪೊಂಗಲ್‌  ಸಂಭ್ರಮಾಚರಣೆ ವೇಳೆ ಗಾಯನ ಪ್ರಸ್ತುತಪಡಿಸಿದ ಬಾಲಕಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಾಲನ್ನು ಉಡುಗೊರೆಯಾಗಿ ನೀಡಿದ್ದಾರೆ.

ಯುವ ಗಾಯಕಿ ಕಾರ್ಯಕ್ರಮ ನಡೆಸಿಕೊಟ್ಟಳು. ನಂತರ ಪ್ರಧಾನಿ ಮೋದಿಯವರ ಕಾಲಿಗೆ ನಮಸ್ಕರಿಸಿದಳು. ಬಾಲಕಿ ಪ್ರತಿಭೆಗೆ ಮೆಚ್ಚುಗೆ ಸೂಚಿಸಿದ ಪ್ರಧಾನಿಯವರು ತಮ್ಮ ಶಾಲನ್ನು ಉಡುಗೊರೆಯಾಗಿ ನೀಡಿದ್ದಾರೆ.

ಇಂದು ಮುಂಜಾನೆ ಪೊಂಗಲ್ ಹಬ್ಬದ ಶುಭಾಶಯಗಳನ್ನು ಕೋರಿದ ಪ್ರಧಾನಿ ಮೋದಿ, ಹಬ್ಬವು ‘ಏಕ್ ಭಾರತ್ ಶ್ರೇಷ್ಠ ಭಾರತ’ದ ಭಾವನೆಯನ್ನು ಬಿಂಬಿಸುತ್ತದೆ. ದೇಶವು ನಿನ್ನೆ ಲೋಹ್ರಿ ಹಬ್ಬವನ್ನು ಆಚರಿಸಿತು. ಕೆಲವರು ಇಂದು ಮಕರ ಸಂಕ್ರಾಂತಿಯನ್ನು ಆಚರಿಸುತ್ತಾರೆ. ಕೆಲವರು ನಾಳೆ ಆಚರಿಸುತ್ತಾರೆ. ಮಾಘ ಬಿಹು ಕೂಡ ಬರುತ್ತಿದೆ. ಈ ಹಬ್ಬಗಳಿಗಾಗಿ ದೇಶವಾಸಿಗಳಿಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ನಿಮ್ಮೆಲ್ಲರಿಗೂ ಪೊಂಗಲ್ ಹಬ್ಬದ ಶುಭಾಶಯಗಳು. ಈ ಪುಣ್ಯ ಸಂದರ್ಭದಲ್ಲಿ ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂತೃಪ್ತಿ ಇರಬೇಕೆಂದು ನಾನು ಬಯಸುತ್ತೇನೆ. ಇಂದು ನಾನು ಸಂಬಂಧಿಕರೊಂದಿಗೆ ಪೊಂಗಲ್ ಆಚರಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಕೂಡ ಉಪಸ್ಥಿತರಿದ್ದರು.

Font Awesome Icons

Leave a Reply

Your email address will not be published. Required fields are marked *