ಬೆಂಗಳೂರು: ದೆಹಲಿಯಲ್ಲಿನ ಕಾಂಗ್ರೆಸ್ನ ಪ್ರತಿಭಟನೆಯನ್ನು ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ.
ಈ ವೇಳೆ ವಿಧಾನಸೌಧದಲ್ಲಿನ ಮುಖ್ಯಮಂತ್ರಿ ಕಚೇರಿಗೆ ಬೀಗ ಹಾಕಲು ಹೋದ ವಿಪಕ್ಷ ನಾಯಕ ಆರ್ ಅಶೋಕ್ರನ್ನ ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಅಲ್ಲದೇ ಕೆಲ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ಯದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಕಚೇರಿ ವಿಧಾನಸೌಧದ 3ನೇ ಮಹಡಿಯಲ್ಲಿದೆ. ಈ ಕಚೇರಿಗೆ ಬಿಜೆಪಿ ನಾಯಕರು ಬೀಗ ಹಾಕಲು ಯತ್ನಿಸಿದಾಗ ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾಗಿದ್ದರು.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಅವರಿಂದ ಪ್ರತಿಭಟನೆ ನಡೆಸಲಾಗುತ್ತಿದೆ.