ಮಂಗಳೂರು: ದ.ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಪೈಪೋಟಿ ಮುಂದುವರಿದಿದ್ದು, ಅಚ್ಚರಿಯ ರೀತಿಯಲ್ಲಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಹೆಸರು ಪ್ರಸ್ತಾಪವಾಗಿದೆ. ಹಿಂದುತ್ವದ ಭದ್ರಕೋಟೆಯಲ್ಲಿ ಸ್ಪೀಕರ್ ಯುಟಿ ಖಾದರ್ಗೆ ಟಿಕೆಟ್ ನೀಡಲು ಕೆಪಿಸಿಸಿಯಲ್ಲಿ ಚರ್ಚೆ ನಡೆದಿದೆ.
ಇನ್ನು ಜಾತ್ಯತೀತ ನಡೆಯಿಂದ ಖಾದರ್ ಅವರಿಗೆ ಎಲ್ಲ ರೀತಿಯ ಓಟ್ ಬ್ಯಾಂಕ್ ಸೆಳೆಯುವ ಶಕ್ತಿ ಇದೆ ಎಂಬುದು ಅವರ ದೊಡ್ಡ ಪ್ಲಸ್ ಪಾಯಿಂಟ್ ಆಗಿದೆ. ಜತೆಗೆ, ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಅಭಿಪ್ರಾಯವೂ ಕ್ಷೇತ್ರದ ಜನತೆಯಲ್ಲಿದೆ. ಹೀಗಾಗಿ ಅವರ ಮೂಲಕ ಕರಾವಳಿ ಪ್ರದೇಶದಲ್ಲಿ ಮತ್ತೆ ಹಿಡಿತ ಸಾಧಿಸುವುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರ.
ಇತ್ತ ದಕ್ಷಿಣ ಕನ್ನಡ ಬಿಜೆಪಿಯಲ್ಲಿಯೂ ಈ ಬಾರಿ ತುಸು ಗೊಂದಲಗಳಿವೆ. ಇದರ ಲಾಭ ಪಡೆಯಲು ಕಾಂಗ್ರೆಸ್ ಯುಟಿ ಖಾದರ್ ಅವರ ಹೆಸರನ್ನು ಮುನ್ನೆಲೆಗೆ ಬಿಟ್ಟಿತೇ ಎಂಬ ಕುತೂಹಲವೂ ಮೂಡಿದೆ.