ಬೆಂಗಳೂರು: ಡಿ.ಕೆ.ಸುರೇಶ್ ಮತ್ತು ವಿನಯ್ ಕುಲಕರ್ಣಿ ಅಂತವರನ್ನ ಗುಂಡಿಟ್ಟು ಕೊಲ್ಲಬೇಕೆಂಬ ವಿವಾದಾತ್ಮ ಹೇಳಿಕೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ದಾವಣಗೆರೆ ಬಡಾವಣೆ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಆರ್‌ಆರ್ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಶಶಾಂಕ್ ಹಾಗೂ ಸಂಜಯ್ ಅವರು ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳುವಂತೆ ಆಗ್ರಹಿಸಿದರು.
ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ಇಂದು ಬೆಳಗ್ಗೆ 8:30 ಸುಮಾರಿಗೆ ಆಗಮಿಸಿದ ಪೊಲೀಸರು ನೋಟಿಸ್ ನೀಡಿದ್ದಾರೆ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಕಲಂ 505 (1), (ಸಿ), 505 (2) 506 ಐಪಿಸಿ ಪ್ರಕರಣ ದಾಖಲಾಗಿದೆ.
ಫೆಬ್ರವರಿ 08 ರಂದು ದಾವಣಗೆರೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭ ನಡೆದಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ ಕೆಎಸ್ ಈಶ್ವರಪ್ಪ “ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ವಿನಯ ಕುಲಕರ್ಣಿ ಮಾದರಿ ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತನ್ನಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಗ್ರಹಿಸಿದ್ದರು.