ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಕೆ : ಸಚಿವ ಈಶ್ವರ್ ಖಂಡ್ರೆ – Just Kannada | Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್

 

ಮೈಸೂರು, ಫೆ.೧೦, ೨೦೨೪ : (justkannada in news ) ಬಂಡೀಪುರ ಅರಣ್ಯ ಪ್ರದೇಶ ವನ್ಯ ಜೀವಿಗಳ ಆವಾಸಸ್ಥಾನವಾಗಿದ್ದು, ಇಲ್ಲಿ ಕಾಡುಪ್ರಾಣಿಗಳ ಸಂಚಾರಕ್ಕೆ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.

ಮೈಸೂರಿನ ಅರಣ್ಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಡೀಪುರ ಅರಣ್ಯದೊಳಗೆ ಇರುವ ರಸ್ತೆ ಮಾರ್ಗವಾಗಿ ಕೇರಳಕ್ಕೆ ಹೋಗಲು ಬೆಳಗ್ಗೆ 6ರಿಂದ ರಾತ್ರಿ 9ರವರೆಗೆ ಅವಕಾಶ ನೀಡಲಾಗಿದೆ. ರಾತ್ರಿ ಸಂಚಾರಕ್ಕೆ ಅವಕಾಶ ನಿರ್ಬಂಧಿಸಲಾಗಿದೆ. ಇದು ಮುಂದುವರಿಯುತ್ತದೆ ಎಂದರು.

ಆದಾಗ್ಯೂ ಕೆಲವು ವಿಶೇಷ ಸಂದರ್ಭ ಅಂದರೆ ವೈದ್ಯಕೀಯ ತುರ್ತು ಇತ್ಯಾದಿ ಸಂದರ್ಭದಲ್ಲಿ ಪರಿಶೀಲಿಸಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದರು.

ಬಂಡಿಪುರದಲ್ಲಿ ರೈಲು ಮಾರ್ಗ ಅಥವಾ ಮೇಲ್ಸೇತುವೆ ನಿರ್ಮಾಣ ಕುರಿತಂತೆ ಸಮೀಕ್ಷೆ ಆಗಿಲ್ಲ ಎಂದು ತಿಳಿಸಿದರು.

ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಕ್ರಮ:

ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಕ್ರಮ ಅತ್ಯಗತ್ಯವಾಗಿದೆ. ಪ್ರತಿಯೊಂದು ಜೀವವೂ ಅಮೂಲ್ಯವಾಗಿದೆ. ಹೀಗಾಗಿ ಬೆಳೆ ಹಾನಿ ಆಗದಂತೆ ಮತ್ತು ಜೀವ ಹಾನಿ ಆಗದ ರೀತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ. ಇದರ ಜೊತೆಗೆ ಅರಣ್ಯ ವಿಸ್ತರಣೆಗೆ ಆದ್ಯತೆ ನೀಡಲಾಗುವುದು ಎಂದರು.

Key words : bandipura ̲ kerala ̲ night ̲ travel ̲ restricted ̲ kandre ̲ Karnataka ̲ government

 

Font Awesome Icons

Leave a Reply

Your email address will not be published. Required fields are marked *