ಕಾಂಗ್ರೆಸ್ ಸರ್ಕಾರಕ್ಕೆ ಮಾತೃ ಹೃದಯವಿದೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಟ್ರಾಮಾ ಕೇರ್ ಸೆಂಟರ್ ಗೆ ಅಡಿಗಲ್ಲು ಹಾಕಿದ್ದು ಕಾಂಗ್ರೆಸ್ ಸರ್ಕಾರ. ಈಗ ಉದ್ಘಾಟನೆ ಮಾಡಿದ್ದೂ ಕೂಡಾ ಕಾಂಗ್ರೆಸ್ ಸರ್ಕಾರ.‌ ಇದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ಹಿಂದಿನ ಬಿಜೆಪಿ ಸರಕಾರ ಐದು ವರ್ಷದಲ್ಲಿ ಈ ಕೇಂದ್ರಕ್ಕೆ ಒಂದು ಕಲ್ಲು ಎತ್ತಿ ಇಡುವ ಕೆಲಸ ಮಾಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ಜಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಹೊಸದಾಗಿ ರೂ 55 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಟ್ರಾಮಾ ಕೇರ್ ಸೆಂಟರ್ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.

ಟ್ರಾಮಾ ಕೇರ್ ಸೆಂಟರ್ ಈ ಭಾಗದ ಹೆಮ್ಮೆಯ ಆರೋಗ್ಯ ಕೇಂದ್ರವಾಗಿದ್ದು, ಕಾಂಗ್ರೆಸ್ ಸರ್ಕಾರ ಈ‌ ಹಿಂದೆ ಅಧಿಕಾರದಲ್ಲಿದ್ದಾಗ ಅಡಿಗಲ್ಲು ಹಾಕಲಾಗಿತ್ತು. ಆದರೆ ಮಧ್ಯೆದ ಐದು ವರ್ಷಗಳ ಅವಧಿಯಲ್ಲಿ ಉದ್ಘಾಟನೆ ಮಾಡಲಾಗಿರಲಿಲ್ಲ. ಈಗ ನಾವು ಉದ್ಘಾಟನೆ ಮಾಡಿದ್ದೇನೆ.‌ ಯಾವುದೇ ಒಂದು ಯೋಜನೆ ಜನರಿಗೆ ಮುಟ್ಟಬೇಕೆಂದರೆ ಸರ್ಕಾರಕ್ಕೆ ಮಾತೃ ಹೃದಯವಿರಬೇಕು. ಅಂತಹ ಹೃದಯ ಕಾಂಗ್ರೆಸ್ ಸರ್ಕಾರಕ್ಕಿದೆ ಎಂದರು.

ಕಲಬುರಗಿಯಲ್ಲಿ ಹಲವಾರು ಹೆಸರಾಂತ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇಎಸ್ ಐಸಿ, ಕಿದ್ವಾಯಿ, ಜಯದೇವ, ಜಿಮ್ಸ್ ನಂತಹ ರಾಷ್ಟ್ರ ಮಟ್ಟದ ಉತೃಷ್ಠ ವೈದ್ಯಕೀಯ ಸೇವೆ ಒದಗಿಸುತ್ತಿವೆ. ಇದು ಹೆಮ್ಮೆಯವಿಚಾರ ಎಂದರು.

ಆರ್ಟಿಕಲ್ 371 J ಅಡಿಯಲ್ಲಿ ಕಳೆದ ಸಾಲಿನಲ್ಲಿ ಈ ಭಾಗದ 1,000 ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು ಲಭ್ಯವಾಗಿವೆ ಎಂದ ಸಚಿವರು ಕಲ್ಯಾಣ ಕರ್ನಾಟಕದಲ್ಲಿ ಆರೋಗ್ಯದ ಕ್ರಾಂತಿಯಾಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವರು ಪ್ರಯತ್ನಪಡುತ್ತಿದ್ದಾರೆ ಹೀಗಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ‘ಹೆಲ್ತ್ ಎಕ್ಸಲೆನ್ಸ್ ಸೆಂಟರ್’ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದರು.

Font Awesome Icons

Leave a Reply

Your email address will not be published. Required fields are marked *