News Kannada
ಬೆಂಗಳೂರು : ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತರಿಗೆ ಸಿಹಿಸುದ್ದಿ ನೀಡಿದ್ದು, ಗೌರವಧನ 7 ಸಾವಿರ ರೂ. ಗೆ ಹೆಚ್ಚಳ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದ ಫ್ರೀಡಂಪಾರ್ಕ್ನಲ್ಲಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದು ಇಂದು ಅವರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ಶೀಘ್ರದಲ್ಲೇ ರಾಜ್ಯದ ಆಶಾ ಕಾರ್ಯಕರ್ತೆಯರ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದ್ದಾರೆ.
ಇನ್ನು ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ ರಾಜ್ಯ ಸರ್ಕಾರ ನೀಡುವ 5 ಸಾವಿರ ರೂ. ಜೊತೆಗೆ 2 ಸಾವಿರ ರೂ. ಸೇರಿಸಿ ಒಟ್ಟು 7 ಸಾವಿರ ರೂ. ನೀಡಲಾಗುವುದು. ಉಳಿದಂತೆ ಆಶಾ ಕಾರ್ಯಕರ್ತೆಯರು ನಡೆಸುವ ಆರೋಗ್ಯ ಸೇವೆ ಚಟುವಟಿಕೆಗಳನ್ನು ಪರಿಗಣಿಸಿ ಪ್ರೋತ್ಸಾಹ ಧನವನ್ನು ಪಾರದರ್ಶಕವಾಗಿ ನೀಡಲಾಗುವುದು. ಸರ್ಕಾರದಿಂದ ಈಗಾಗಲೇ ಗೃಹಲಕ್ಷ್ಮೀ ಯೋಜನೆಯಡಿ ನೀಡುವ 2 ಸಾವಿರ ರೂ. ಆಶಾ ಕಾರ್ಯಕರ್ತೆಯರಿಗೂ ಅನ್ವಯ ಆಗುವಂತೆ ಕ್ರಮ ಕೈಗೊಳ್ಳಲಾಗಿದೆ. 5 ಲಕ್ಷ ಆರೋಗ್ಯ ವಿಮೆಯನ್ನು ಆಶಾ ವರ್ಕರ್ಸ್ಗೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಆಶಾ ಕಾರ್ಯಕರ್ತೆಯರ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಬದ್ಧವಾಗಿದೆ. ಈಗಾಗಲೇ ಆಶಾ ಸಹೋದರಿಯರ ಹಲವು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಕಾರ್ಯೋನ್ಮುಖವಾಗಿದೆ. ರಾಜ್ಯದ ಮಹಿಳೆಯರ ಕಾಳಜಿ ನಮ್ಮ ಜವಾಬ್ದಾರಿಯಾಗಿದೆ.#AshaWorkers pic.twitter.com/6wdNt6npGd
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 13, 2024
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.
This site is protected by reCAPTCHA and the Google
Privacy Policy and
Terms of Service apply.
44