89ನೇ ವಯಸ್ಸಿನಲ್ಲಿ ಪಿಹೆಚ್‌ಡಿ ಮುಗಿಸಿ ಡಾಕ್ಟರೇಟ್ ಪದವಿ ಪಡೆದುಕೊಂಡ ಅಜ್ಜ

ಧಾರವಾಡ: ಸಾಧನೆಗೆ ವಯಸ್ಸಿನ ಮಿತಿ ಇಲ್ಲ ಎಂಬುದನ್ನು ಧಾರವಾಡದ  ಹಿರಿಯ ಅಜ್ಜರೊಬ್ಬರು ಸಾಬೀತು ಪಡಿಸಿದ್ದಾರೆ. ಜಯನಗರದಲ್ಲಿರುವ ಮಾರ್ಕಂಡೇಯ ದೊಡಮನಿ ಎಂಬವರು ತಮ್ಮ 89ನೇ ವಯಸ್ಸಿನಲ್ಲಿ ಪಿಹೆಚ್‌ಡಿ  ಮುಗಿಸಿ ಇದೀಗ ಡಾಕ್ಟರೇಟ್  ಪದವಿ ಪಡೆದುಕೊಂಡಿದ್ದಾರೆ.

ರಾಜ್ಯದ ಶೈಕ್ಷಣಿಕ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಈ ಇಳಿ ವಯಸ್ಸಿನ ವೃದ್ಧರೊಬ್ಬರು ಪಿಎಚ್‌ಡಿ ಪದವಿಯನ್ನ ಪಡೆದುಕೊಂಡಿರುವುದು. ಡೋಹರ ಕಕ್ಕಯ್ಯನವರು ಬರೆದ ಕೇವಲ 6 ವಚನಗಳನ್ನು ಮುಂದಿಟ್ಟುಕೊಂಡು 150 ಪುಟಗಳುಳ್ಳ “ಶಿವಶರಹಣ ಡೋಹರ ಕಕ್ಕಯ್ಯ” ಒಂದು ಅಧ್ಯಯನ ಎಂಬ ಮಹಾ ಪ್ರಬಂಧವನ್ನು ಅವರು ಬರೆದಿದ್ದು, ಸತತ 18 ವರ್ಷಗಳಿಂದ ಕಕ್ಕಯ್ಯನವರ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.

ಈ ಅವಧಿಯಲ್ಲಿ ಅವರ ಗೈಡ್ ನಿಧನರಾದ ಹಿನ್ನೆಲೆ ಪ್ರಬಂಧ ಸಿದ್ಧಪಡಿಸಲು ವಿಳಂಬವಾಯಿತು. ಆ ನಂತರ ಡಾ.ನಿಂಗಪ್ಪ ಅವರು ಮಾರ್ಗದರ್ಶನ ಮಾಡಿದ್ದಾರೆ. ಕಾದ್ರೊಳ್ಳಿ, ಕಕ್ಕೇರಿ ಸೇರಿದಂತೆ ಇತರ ಕಡೆಗಳಲ್ಲಿ ಸಂಚರಿಸಿ ಕಕ್ಕಯ್ಯನವರ ಬಗ್ಗೆ ಅಧ್ಯಯನ ಮಾಡಿ ಮಹಾಪ್ರಬಂಧವನ್ನು ಅವರು ಸಿದ್ಧಪಡಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *