ಗುಂಡ್ಲುಪೇಟೆ: ಕೇರಳದ ವೈನಾಡಿನಲ್ಲಿ ಆನೆ ದಾಳಿಗೆ ಸಿಲುಕಿ ಮೃತಪಟ್ಟ ಅಜೀಶ್ ಕುಟುಂಬಸ್ಥರನ್ನ ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಭೇಟಿ ಮಾಡಿ ಸಾಂತ್ವನ ಹೇಳಿದರು.
ಕಳೆದ ವಾರವಷ್ಟೇ ಆನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಅಜೀಶ್ ಕುಟುಂಬಸ್ತರನ್ನ ಭೇಟಿ ಮಾಡಿದ ಕೇಂದ್ರ ಸಚಿವ ಭೂಪೇಂದರ್ ಯಾದವ್ ಸಾಂತ್ವಾನ ಹೇಳುವ ಮೂಲಕ ಮನೆಯ ಯಜಮಾನನ್ನ ಕಳೆದುಕೊಂಡಿರುವುದು ತುಂಬಲಾರದ ನಷ್ಟವಾಗಿದೆ, ಪ್ರದಾನ ಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ದುಃಖದ ಸಮಯದಲ್ಲಿ ಕುಟುಂಬದ ಜೊತೆ ನಿಲ್ಲುತ್ತದೆ ಎಂದು ಭರವಸೆ ನೀಡಿದರು.
ಮಾನವ ಮತ್ತು ಪ್ರಾಣಿ ಸಂಘರ್ಷವನ್ನ ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಎರಡು ರಾಜ್ಯದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.