ಬೆಂಗಳೂರು, ಫೆಬ್ರವರಿ,22,2024(www.justkannada.in): ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಿಸುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹುಪೌಷ್ಠಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ನಿತ್ಯ 60 ಲಕ್ಷದಂತೆ ವಾರಕ್ಕೆ 1.80 ಕೋಟಿ ಮಕ್ಕಳು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಮಕ್ಕಳಿಗೆ ಪೌಷ್ಟಿಕಾಂಶ ನೀಡುವ ನಿಟ್ಟಿನಲ್ಲಿ ಸರ್ಕಾರ ರಾಗಿ ಮಾಲ್ಟ್ ನೀಡುವ ನಿರ್ಧಾರ ಕೈಗೊಂಡಿದೆ.
Key words: CM Siddaramaiah -launched – scheme -distribution -millet malt – school children.
The post ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ. appeared first on Just Kannada | Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.