ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಯುವಕ ಸಾವು

ಕಾಸರಗೋಡು: ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಯುವಕನೋರ್ವ ಮೃತಪಟ್ಟ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಕುಂಬ್ದಾಜೆಯಲ್ಲಿ ನಡೆದಿದೆ.

ಕುಂಬ್ದಾಜೆಯ ಮುಹಮ್ಮದ್ ಸುಹೈಲ್ (20) ಮೃತಪಟ್ಟವನು. ಎರಡು ದಿನಗಳ ಹಿಂದೆ. ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಸುಹೈಲ್ ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾನೆ. ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *