ನಾಮಫಲಕಗಳಲ್ಲಿ ‘ಕನ್ನಡ ಕಡ್ಡಾಯ’ ವಿಧೇಯಕಕ್ಕೆ ‘ರಾಜ್ಯಪಾಲರ’ ಅಂಕಿತ

ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ-2024 ಮಂಡಿಸಲಾಗಿತ್ತು. ಈ ತಿದ್ದುಪಡಿ ವಿಧೇಯಕಕ್ಕೆ ಉಭಯ ಸದನಗಳಲ್ಲೂ ಅಂಗೀಕಾರಗೊಂಡಿತ್ತು. ಇದೀಗ ರಾಜ್ಯಪಾಲರು ಕೂಡ ಅಂಕಿತದ ಮುದ್ರೆಯನ್ನು ಒತ್ತಿದ್ದಾರೆ. ಹೀಗಾಗಿ ಇನ್ಮುಂದೆ ಕರ್ನಾಟಕದಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯ ಬಳಕೆ ಕಡ್ಡಾಯವಾಗಿದೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ) ಅಧಿನಿಯಮ-2024 ಅನ್ನು ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ವಿಧಾನಸಭೆ, ಪರಿಷತ್ತಿನಲ್ಲಿ ತಿದ್ದುಪಡಿ ವಿಧೇಯಕಕ್ಕೆ ಅಂಕಿತ ದೊರೆತಿತ್ತು. ಈ ಮಸೂಧೆಯನ್ನು ಕಾಯ್ದೆಯಾಗಿಸುವ ನಿಟ್ಟಿನಲ್ಲಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು.

ಇಂದು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ) ವಿಧೇಯಕತ 2024 ದಿನಾಂಕ 25-02-2024ರಂದು ರಾಜ್ಯಪಾಲರ ಒಪ್ಪಿಗೆ ದೊರೆತಿದೆ. ಹೀಗಾಗಿ ವಿಶೇಷ ರಾಜ್ಯಪತ್ರಿಕೆಯಲ್ಲಿ ಅಧಿಕೃತವಾಗಿ ಆದೇಶ ಮಾಡಲಾಗಿದೆ.

Font Awesome Icons

Leave a Reply

Your email address will not be published. Required fields are marked *