ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರ, ಕೊಲೆಗೈದು ಪರಾರಿಯಾಗಿದ್ದ ಆರೋಪಿ ಬಂಧನ

ಬೆಂಗಳೂರು: ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿದ್ದ ಘಟನೆ ಫೆ. 20ರಂದು ನಡೆದಿತ್ತು. ಇದೀಗ ಈ ಘಟನೆ ಹಿಂದಿನ ಆರೋಪಿ ಆಟೋ ಚಾಲಕನನ್ನು ಸಂಪಂಗಿರಾಮನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಅಂಜನಪ್ಪ ಗಾರ್ಡನ್‌ ನಿವಾಸಿ ಮುಬಾರಕ್‌(38) ಎಂದು ಗುರುತಿಸಲಾಗಿದೆ. ಕೆ.ಎಚ್‌.ರಸ್ತೆಯ ನಿರ್ಮಾಣ ಹಂತದ ಕಟ್ಟಡದ ಕೆಳಗೆ ಸುಮಾರು 25 ವರ್ಷದ ಅಪರಿಚಿತ ಮಹಿಳೆಯ ಮೃತದೇಹ ಬಿದ್ದಿರುವ ಬಗ್ಗೆ ಸಾರ್ವಜನಿಕರು ಫೆ.20ರಂದು ಬೆಳಗ್ಗೆ ನೀಡಿದ ಮಾಹಿತಿ ಮೇರೆಗೆ ಸಂಪಂಗಿರಾಮನಗರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿ ಅಸಹಜ ಸಾವು ಪ್ರಕರಣ ದಾಖಲಿಸಿದ್ದರು.

ಮೃತದೇಹದ ಮರಣೋತ್ತರ ಪರೀಕ್ಷೆ ವೇಳೆ ದುಷ್ಕರ್ಮಿಗಳು ಅತ್ಯಾಚಾರ ಮಾಡಿ ಬಳಿಕ ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು. ಈ ಸಂಬಂಧ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಪೊಲೀಸರು ಪ್ರಕರಣವನ್ನು ಭೇದಿಸಿ ಆರೋಪಿ ಆಟೋ ಚಾಲಕ ಮುಬಾರಕ್‌ನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಮಹಿಳೆ ಬಗ್ಗೆ ಯಾವುದೇ ಗುರುತು ಪತ್ತೆಯಾಗದೆ ಅಂತಿಮ ವಿಧಿ ವಿಧಾನವನ್ನು ಪೊಲೀಸರೇ ಮಾಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *