ಕಡಬ: ಕಾಲೇಜು ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ !

ಕಡಬ: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು(ಮಾ.04) ನಡೆದಿದೆ.

ಘಟನೆಯಲ್ಲಿ ಅಲೀನಾ ಸಿಬಿ, ಅರ್ಚನಾ, ಅಮೃತ ಎಂಬ ವಿದ್ಯಾರ್ಥಿನಿಯರ ಮೇಲೆ ದಾಳಿ ನಡೆದಿದ್ದು, ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯವಾಗಿದೆ. ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿಗೆ ರವಾನೆಗೆ ಸಿದ್ದತೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿಯರು ಎಲ್ಲರೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾಗಿದ್ದಾರೆ. ವಿದ್ಯಾರ್ಥಿಗಳು ಶಾಲಾ ವರಾಂಡದಲ್ಲಿ ಪರೀಕ್ಷಾ ತಯಾರಿ ನಡೆಸುವ ವೇಳೆ ಘಟನೆ ನಡೆದಿದೆ.

ಇನ್ನು  ಆ್ಯಸಿಡ್ ಎರಚಿದ  ಆರೋಪಿಯನ್ನು  ಕೇರಳ ಮೂಲದ ಎಬಿನ್ ಎಂದು ಗುರುತಿಸಲಾಗಿದ್ದು,  ಈತ ಎಂಬಿಎ ವ್ಯಾಸಂಗ ಮಾಡುತ್ತಿದ್ದ.  ಅಲೀನಾ ಸಿಬಿ ಎಂಬ ವಿದ್ಯಾರ್ಥಿನಿಯನ್ನ ಟಾರ್ಗೆಟ್ ಮಾಡಿ ಈತ ದಾಳಿ ನಡೆಸಿದ್ದಾನೆ.  ಪರಿಣಾಮ ಆಕೆಯ ಗೆಳತಿಯರಿಗೂ ಗಂಭೀರ ಗಾಯವಾಗಿದೆ.

Font Awesome Icons

Leave a Reply

Your email address will not be published. Required fields are marked *