ಶೀಘ್ರದಲ್ಲೇ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾಗಲಿರುವ ಅಲ್ಪಸಂಖ್ಯಾತ ಮುಖಂಡರ.

ಬೀದರ್‌:   ಬೀದರನ ಪ್ರತಿಷ್ಠಿತ ನೂರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಮತ್ತು ಕಾಂಗ್ರೆಸ್ ಮುಖಂಡರಾದ ಡಾ. ಎಂ.ಡಿ. ಅಯಾಜ್ ಖಾನ್ ಅವರಿಗೆ ಬೀದರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡಬೇಕು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವರಿಷ್ಠ ರಿಗೆ ಭೇಟಿ ಮಾಡುತ್ತೇವೆ ಎಂದು ಮುಸ್ಲಿಂ ಸಮಾಜದ ಧರ್ಮ ಗುರುಗಳು ಮತ್ತು ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬೀದರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಶಿಕ್ಷಣ ಪ್ರೇಮಿ ಹಿರಿಯ ಮುಖಂಡ ಅಯಾಜ್ ಖಾನ್ ಅವರಿಗೆ ನೀಡಬೇಕು ಎಂದು ಬೀದರ್ ಜಿಲ್ಲಾ ಕುಲ್ ಜಮಾತ್ ಅಧ್ಯಕ್ಷ ಮುಫ್ತಿ ಅಬ್ದುಲ್ ಗಫಾರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು ̤

ಶೀಘ್ರದಲ್ಲೇ ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಅವರನ್ನು ಭೇಟಿಯಾಗಿ ಅಲ್ಪಸಂಖ್ಯಾತರಿಗೆ ಬೀದರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಬೇಕೆಂದು ಬೇಡಿಕೆ ಮಂಡಿಸಲಾಗುವುದು ಎಂದು ನಗರದ ಸಿದ್ಧಿ ತಾಲೀಂನ ಉರ್ದು ಹಾಲ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು ̤ ಅಯಾಜ್ ಖಾನ್ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಲ್ಲಿ ಒಬ್ಬರಾಗಿದ್ದಾರೆ. ಬೀದರ್, ಕಲಬುರಗಿ, ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದಾರೆ ̤

ಬಡ ಮಕ್ಕಳಿಗೆ ಉಚಿತ ಶಿಕ್ಷಣ ಕೊಡುತ್ತಿದ್ದಾರೆ. ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿದ್ದಾರೆ. ಅವರು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಕೂಡ ಆಗಿದ್ದಾರೆ.  ಅವರಿಗೆ ಟಿಕೆಟ್ ನೀಡಿದರೆ ಗೆಲುವು ನಿಶ್ಚಿತವಾಗಿದೆ ಎಂದು ಹೇಳಿದರು.

ಸ್ವಾತಂತ್ರ್ಯ ನಂತರ ಮೊದಲ ಚುನಾವಣೆಯಲ್ಲಿ ಮಾತ್ರ ಬೀದರ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅಲ್ಪಸಂಖ್ಯಾತರಿಗೆ ಕೊಡಲಾಗಿತ್ತು. ಆಗ ಉತ್ತರ ಪ್ರದೇಶದ ಶೌಕತ್ ಅನ್ಸಾರಿ ಆಯ್ಕೆಯಾಗಿದ್ದರು. ಅನಂತರ ಈವರೆಗೂ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಲ್ಲಾಎಂದು ತಿಳಿಸಿದರು.

ಬೀದರ್ ಲೋಕಸಭಾ ಕ್ಷೇತ್ರದಲ್ಲಿ 5 ರಿಂದ 6 ಲಕ್ಷ ಅಲ್ಪಸಂಖ್ಯಾತ ಸಮುದಾಯದ ಮತದಾರರು ಇದ್ದಾರೆ. ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಸೋಲು ಉಂಟಾಗಿತ್ತು. ಈ ಬಾರಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದರೆ ಗೆಲುವು ಖಚಿತವಾಗಿದೆ ಎಂದು ಹೇಳಿದರು.ರಾಜ್ಯದ ಎರಡು ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡುವುದಾಗಿ ರಾಜ್ಯದ ಕಾಂಗ್ರೆಸ್ ಮುಖಂಡರು ಭರವಸೆ ನೀಡಿದ್ದಾರೆ. ಬೀದರ್ ಲೋಕಸಭಾ ಕ್ಷೇತ್ರದಿಂದ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಟ್ಟರೆ ಒಳ್ಳೆಯದು ಎಂದು ತಿಳಿಸಿದರು.

ಅಲ್ಪಸಂಖ್ಯಾತರು ನಿರಂತರ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಪಕ್ಷದ ಟಿಕೆಟ್ ಕೇಳುವುದು ನಮ್ಮ ಹಕ್ಕಾಗಿದೆ. ಅಯಾಜ್ ಖಾನ್ ಅವರಿಗೆ ಪಕ್ಷದ ವರಿಷ್ಠರು ಟಿಕೆಟ್ ಕೊಟ್ಟರೆ ಸಂತಸ ಎಂದು ಜಮೀಯತ್ ಉಲ್ಮಾ ಜಿಲ್ಲಾ ಅಧ್ಯಕ್ಷ ಅಬ್ದುಲ್ ಗಣಿ ಹೇಳಿದರು.

ಮುಖಂಡರಾದ ಉಮರ್ ಖುರೇಶಿ, ಎಹತೆ ಶಾಮ್ ಉಲ್ ಹಕ್, ಅಲ್ಲಾಬಕ್ಷ, ಇಫ್ತೆಕಾರ್ ಹುಸೇನ್, ಸಗೀರ್, ರಫಿಕ್ ಹಾಗೂ ಮನ್ಸೂರ್ ಅಹಮ್ಮದ್ ಖಾದ್ರಿ ಉಪಸ್ಥಿತರಿದ್ದರು.

Font Awesome Icons

Leave a Reply

Your email address will not be published. Required fields are marked *