ಅಸ್ಸಾಂ: ಪ್ರಧಾನಿ ಮೋದಿ ಅವರು ಇಂದು(ಮಾ.9) ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ಅಸ್ಸಾಂ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.
ಇಂದು ಬೆಳ್ಳಂಬೆಳಗ್ಗೆಯೇ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡುವ ಮೂಲಕ ಅವರ ಪ್ರವಾಸವು ಪ್ರಾರಂಭವಾಗಿದೆ.
ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ಸಂರಕ್ಷಿತ ಪ್ರದೇಶದಲ್ಲಿ ಆನೆ ಮತ್ತು ಜೀಪು ಸಫಾರಿಯಲ್ಲಿ ಮೋದಿಯವರು ಸಾಗಿದರು.
ಯುನೆಸ್ಕೋ ವಿಶ್ವ ಪರಂಪರೆಯ ತಾಣಕ್ಕೆ ಇಂದು ಮೊದಲ ಬಾರಿ ಭೇಟಿ ನೀಡಿದ ಮೋದಿ, ಆರಂಭದಲ್ಲಿ ಉದ್ಯಾನವನದ ಸೆಂಟ್ರಲ್ ಕೊಹೊರಾ ಶ್ರೇಣಿಯ ಮಿಹಿಮುಖ್ ಪ್ರದೇಶದಲ್ಲಿ ಆನೆ ಸಫಾರಿಯನ್ನು ಕೈಗೊಂಡರು, ನಂತರ ಅದೇ ವ್ಯಾಪ್ತಿಯಲ್ಲಿ ಜೀಪ್ ಸಫಾರಿ ನಡೆಸಿದರು. ಉದ್ಯಾನದ ನಿರ್ದೇಶಕಿ ಸೋನಾಲಿ ಘೋಷ್ ಮತ್ತು ಇತರ ಹಿರಿಯ ಅರಣ್ಯ ಅಧಿಕಾರಿಗಳು ಪ್ರಧಾನಿ ಜೊತೆಗಿದ್ದರು.
#WATCH | Prime Minister Narendra Modi visited Kaziranga National Park in Assam today. The PM also took an elephant safari here. pic.twitter.com/Kck92SKIhp
— ANI (@ANI) March 9, 2024