ತಮಿಳು ನಿರ್ದೇಶಕನ ಜೊತೆ ಸಿನಿಮಾ ಘೋಷಿಸಿದ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ದೊಡ್ಡದೊಂದು ಹಿಟ್ ಕೊಟ್ಟು ವರ್ಷಗಳೇ ಆಗಿವೆ. ಹೀಗಾಗಿ ದೊಡ್ಡ ಹಿಟ್ ಸಿನಿಮಾಕ್ಕಾಗಿ ಸಲ್ಮಾನ್ ಖಾನ್ ಕಾತರವಾಗಿದ್ದು, ಇದಕ್ಕಾಗಿ ದಕ್ಷಿಣ ಭಾರತದ ಸ್ಟಾರ್ ನಿರ್ದೇಶಕನ ಜೊತೆ ಕೈ ಜೋಡಿಸಿದ್ದಾರೆ.

ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ನಿರ್ದೇಶನ ಮಾಡಲಿರುವ ಸಿನಿಮಾದಲ್ಲಿ ಸಲ್ಮಾನ್ ಖಾನ್ ನಾಯಕನಾಗಿ ನಟಿಸಲಿದ್ದಾರೆ. ಈ ಸಿನಿಮಾವನ್ನು ಸಲ್ಮಾನ್ ಖಾನ್​ರ ಆಪ್ತ ಗೆಳೆಯ ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡಲಿದ್ದಾರೆ. ಇದು ಭಾರಿ ಬಜೆಟ್​ ಸಿನಿಮಾ ಆಗಿರಲಿದೆಯಂತೆ.

ಗಜಿನಿ’, ‘ಸ್ಟಾಲಿನ್’, ‘ತುಪ್ಪಾಕಿ’, ‘ಸೆವೆಂತ್ ಸೆನ್ಸ್’, ‘ಸ್ಪೈಡರ್’ ಇನ್ನೂ ಹಲವಾರು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈಗ ಸಲ್ಮಾನ್ ಖಾನ್​ರ ಮುಂದಿನ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ.

ತಮ್ಮ ಹೊಸ ಸಿನಿಮಾ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಸಲ್ಮಾನ್ ಖಾನ್, ‘ಈ ಪ್ರತಿಭಾವಂತ ತಂಡವನ್ನು ಸೇರಿಕೊಳ್ಳುತ್ತಿರುವುದಕ್ಕೆ ಬಹಳ ಸಂತಸವಾಗುತ್ತಿದೆ. ಎಆರ್ ಮುರುಗದಾಸ್ ಮತ್ತು ನನ್ನ ಗೆಳೆಯ ಸಾಜಿದ್ ನಾಡಿಯಾವಾಲ ಜೊತೆಗೆ ಸಿನಿಮಾ ಮಾಡುತ್ತಿರುವುದಕ್ಕೆ ಬಹಳ ಉತ್ಸುಕನಾಗಿದ್ದೇನೆ. ಈ ಸಿನಿಮಾ ಬಹಳ ವಿಶೇಷವಾಗಿರಲಿದೆ. ಈ ಸಿನಿಮಾಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ ಮತ್ತು ನಿರೀಕ್ಷೆಗಳನ್ನು ಇರಿಸಿಕೊಂಡಿದ್ದೇನೆ. 2025ರ ಈದ್​ ಹಬ್ಬಕ್ಕೆ ಸಿನಿಮಾ ಬಿಡುಗಡೆ ಆಗಲಿದೆ’ ಎಂದಿದ್ದಾರೆ.

 

 

Font Awesome Icons

Leave a Reply

Your email address will not be published. Required fields are marked *