ಸಂಘಟನಾ ಕಾರ್ಯದರ್ಶಿ ಹೇಮಂತ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬೀದರ : ಬೇಸಿಗೆ ಶಿಬಿರದಲ್ಲಿ ಭಾಗವಹಿಸುವುದರಿಂದ ಮಕ್ಕಳು ಇತರೆ ಮಕ್ಕಳೊಂದಿಗೆ ಹೊಸದಾಗಿ ಸ್ನೇಹವನ್ನು ಸಂಪಾದಿಸುವುದು ಹಾಗೂ ವಿವಿಧ ರೀತಿಯ ಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕ್ರೀಯಾಶೀಲರಾಗಲು ಹಾಗೂ ಸಂಸ್ಕಾರವಂತರಾಗಲು ಸಾಧ್ಯ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೀದರ ಸಂಘಟನಾ ಕಾರ್ಯದರ್ಶಿ ಹೇಮಂತ ತಿಳಿಸಿದರು.

ಬೀದರ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಬಸವನಗರದಲ್ಲಿ ಸೂರ್ಯ ಫೌಂಡೇಶನ್ ವತಿಯಿಂದ ಆಯೋಜಿಸಿದ 6 ರಿಂದ 14 ವರ್ಷದ ಮಕ್ಕಳಿಗಾಗಿ ಆಯೋಜಿಸಿರುವ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಕ್ಕಳು ರಜೆಯ ದಿನಗಳನ್ನು ಸ್ನೇಹಿತರೊಂದಿಗೆ ಕಳೆಯದೆ ಮೊಬೈಲ್‍ನಲ್ಲಿ ಗೇಮ್‌ ಆಡುವುದರ ಮೂಲಕ ಕಳೆಯುತ್ತಿದ್ದು, ಇದರಿಂದ ಮಕ್ಕಳಿಗೆ ಸಾಮಾಜಿಕ ಸಂಬಂಧಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬೇಸಿಗೆ ಶಿಬಿರದಿಂದ ಮಕ್ಕಳು ವಿವಿಧ ರೀತಿಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬಹುದು ಈ ನಿಟ್ಟಿನಲ್ಲಿ ಸೂರ್ಯ ಫೌಂಡೇಶನ್ ಸಾಮಾಜಿಕ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು.

1

ಸೂರ್ಯ ಫೌಂಡೇಶನ್ ಸಂಯೋಜಕರಾದ ಗುರುನಾಥ ರಾಜಗೀರಾ ಮಾತನಾಡಿ ಫೌಂಡೇಶನ್ ಸಂಸ್ಥಾಪಕರಾದ ಜಯಪ್ರಕಾಶ ಅಗ್ರವಾಲ ಅವರ ಮಾರ್ಗದರ್ಶನದಲ್ಲಿ ಮತ್ತು ಬೀದರ ಜಿಲ್ಲೆಯವರೆ ಆದ ಸೂರ್ಯ ಫೌಂಡೇಶನ್ ರಾಷ್ಟ್ರೀಯ ಉಪಾಧ್ಯಕ್ಷರಾದ ಅನಂತ ಬಿರಾದಾರ ಅವರ ನೇತೃತ್ವದಲ್ಲಿ ನಿರಂತರವಾಗಿ ಜಿಲ್ಲೆಯಲ್ಲಿ ಅನೇಕ ತರಹದ ಸಾಮಾಜಿಕ ಚಟುವಟಿಕೆಗಳನ್ನು ಮಾಡುತ್ತಾ ಬರಲಾಗುತ್ತಿದೆ ಅದರಲ್ಲಿ ಈ ಬೇಸಿಗೆ ಶಿಬಿರವು ಪ್ರಮುಖವಾಗಿದೆ.

ಮಕ್ಕಳಲ್ಲಿ ಒಂದಲ್ಲಾ ಒಂದು ಪ್ರತಿಭೆಯಿರುತ್ತದೆ, ಮಕ್ಕಳ ಪ್ರತಿಭೆಯನ್ನು ಹೊರತರಲು ಹಾಗೂ ಹೊರತಂದ ಪ್ರತಿಭೆಯನ್ನು ಬೆಳೆಸಲು ಬೇಸಿಗೆ ಶಿಬಿರ ಬಹಳ ಉತ್ತಮ ವೇದಿಕೆಯಾಗಿದೆ, ಈ ಪ್ರಯುಕ್ತ ಫೊಷಕರು ತಮ್ಮ ಮಕ್ಕಳ ಹಿತದೃಷ್ಟಿಯಿಂದ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಸಂಧರ್ಭದಲ್ಲಿ ಗ್ರಾಮದ ಮುಖಂಡರಾದ ಬಸವರಾಜ, ರಮೇಶ ಅರಾಳೆ, ಸಂಗಮೇಶ ದಾನಿ ಸೇರಿದಂತೆ ಇತರರಿದ್ದರು.

 

Font Awesome Icons

Leave a Reply

Your email address will not be published. Required fields are marked *