14 ವರ್ಷದ ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ಅನುಮತಿ

ನವದೆಹಲಿ: ಸುಪ್ರೀಂ ಕೋರ್ಟ್  14 ವರ್ಷದ ಅತ್ಯಾಚಾರ ಸಂತ್ರಸ್ತೆಗೆ 30ನೇ ವಾರದಲ್ಲಿ ಗರ್ಭಪಾತ ಮಾಡಲು ಅನುಮತಿ ನೀಡಿದೆ.

ಅತ್ಯಾಚಾರದಿಂದ ಅಪ್ರಾಪ್ತೆ ಗರ್ಭಿಣಿಯಾಗಿದ್ದಳು. ಬಳಿಕ ಗರ್ಭಪಾತಕ್ಕೆ ಅನುಮತಿ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಳು. ಇಂದು ಮುಖ್ಯ ನ್ಯಾ. ಡಿವೈ ಚಂದ್ರಚೂಡ್ ನೇತೃತ್ವದ ತ್ರಿ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ವೈದ್ಯಕೀಯ ವರದಿಗಳನ್ನು ಆಧರಿಸಿ ಗರ್ಭಪಾತಕ್ಕೆ ಅನುಮತಿ ನೀಡಿದೆ.

ಏಪ್ರಿಲ್ 19 ರಂದು ಸುಪ್ರೀಂ ಕೋರ್ಟ್ 14 ವರ್ಷದ ಅತ್ಯಾಚಾರ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಗೆ ಆದೇಶಿಸಿತ್ತು.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ವಾದ ಮಂಡಿಸಿದ್ದರು. ವೈದ್ಯಕೀಯ ಗರ್ಭಪಾತಕ್ಕೆ ಒಳಗಾಗಿದ್ದರೆ ಅಥವಾ ಮಾಡದಂತೆ ಸೂಚಿಸಿದರೆ ಬಾಲಕಿಯ ದೈಹಿಕ ಮತ್ತು ಮಾನಸಿಕ ಸ್ಥಿತಿಯ ಬಗ್ಗೆ ಕೋರ್ಟ್ ಮುಂಬೈನ ಸಿಯಾನ್ ಆಸ್ಪತ್ರೆಯಿಂದ ವರದಿಯನ್ನು ಕೇಳಿತ್ತು.

Font Awesome Icons

Leave a Reply

Your email address will not be published. Required fields are marked *