ಗ್ರಾಮಸ್ಥರು ಎಚ್ಚರಿಕೆ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಚಾಮರಾಜನಗರ:  ಕೆರೆಗಳಿಗೆ ನೀರು ತುಂಬಿಸದಿದ್ರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವುದಿಲ್ಲ ಎಂದು ಗುಂಡ್ಲುಪೇಟೆ ತಾಲೂಕಿನ ಕುಂದಕೆರೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಏಪ್ರಿಲ್ 16 ರಂದು ಶಿವಪುರದ ಕಲ್ಲುಕಟ್ಟೆ ಕೆರೆಯಿಂದ ಪಾದಯಾತ್ರೆ ನಡೆಸುವ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು ಆದರೆ ರೈತಾಪಿ ವರ್ಗದ ಜನರ ಮನವಿಗೆ ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ , ದೇಶಕ್ಕೆ ಅನ್ನ ನೀಡುವ ರೈತನ ಕುರಿತಂತೆ ಅಳುವ ಸರ್ಕಾರಗಳು ಅಸಡ್ಡೆತನ ತೋರುತ್ತಿವೆ ಆದುದರಿಂದ ಈ ಬಾರಿ ಲೋಕಸಭಾ ಚುನಾವಣೆಗೆ ಮತ ಚಲಾವಣೆ ಮಾಡುವುದಿಲ್ಲ ಎಂಬ ಶಪಥ ಮಾಡಿದ್ದಾರೆ.

ವಡ್ಡಗೆರೆ ಕೆರೆಯಿಂದ ನಲ್ಲೂರು ಅಮಾನಿ ಕೆರೆಗೆ ನೀರು ತುಂಬಿಸಲುಆ ಅಗತ್ಯ ಕ್ರಮವನ್ನ ತ್ವರಿತವಾಗಿ ಕೈಗೊಳ್ಳಬೇಕು ಎಂದು ವಿನಂತಿಸಿದ್ರು ಸಹ ಜಿಲ್ಲಾಡಳಿತ ನಿರ್ಲಕ್ಷ್ಯ ತೋರುತ್ತಿದೆ ಈ ನಿಟ್ಟಿನಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Font Awesome Icons

Leave a Reply

Your email address will not be published. Required fields are marked *