ಬೆಂಗಳೂರು: ಏಪ್ರಿಲ್ 29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ತುಮಕೂರು, ಮೈಸೂರು, ಹಾಸನದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಳಗಾವಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮುಂದಿನ 7 ದಿನ ಯಾವುದೇ ಮಳೆಯಾಗುವುದಿಲ್ಲ ಎಂದು ತಿಳಿದು ಬಂದಿದೆ.