ಕರ್ನಾಟಕ ಮಾಧ್ಯಮ ಅಕಾಡೆಮಿಗೆ ನೂತನ ಅಧ್ಯಕ್ಷೆ ಆಯೇಷಾ ಖಾನಂ ನೇಮಕ . » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


 

Senio journalist from Bangalore Ayesha Khanam appointed new president of Karnataka Media Academy.

ಬೆಂಗಳೂರು, ಜು.10,2024: (www.justkannada.in news) ಕರ್ನಾಟಕ ಮಾಧ್ಯಮ ಅಕಾಡೆಮಿಗೆ ನೂತನ ಅಧ್ಯಕ್ಷೆಯಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ನೇಮಕ.

ಕರ್ನಾಟಕ ಸಾರ್ವಜನಿಕ ಮತ್ತು ಸಂಪರ್ಕ ಇಲಾಖೆ ವ್ಯಾಪ್ತಿಗೆ ಬರುವ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಇದೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷೆಯನ್ನು ರಾಜ್ಯ ಸರಕಾರ ನೇಮಕಗೊಳಿಸಿದೆ. ಜತೆಗೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಿಗೆ ಈ ಹುದ್ದೆ ಲಭಿಸಿದೆ.

ಅಕಾಡೆಮಿ ಸದಸ್ಯರಾಗಿ ಹಿರಿಯ ಪತ್ರಕರ್ತರಾದ ಚಿತ್ರದುರ್ಗದ ಎಂ.ಎನ್. ಆಹೋಬಳಪತಿ,‌  ಹಿರಿಯ ಪತ್ರಿಕಾ ಛಾಯಾಗ್ರಾಹಕ, ಬೆಂಗಳೂರಿನ ಕೆ.ವೆಂಕಟೇಶ್ ಹಾಗೂ ಹಿರಿಯ ಪತ್ರಕರ್ತ ಗಂಗಾವತಿಯ ಕೆ.ನಿಂಗಜ್ಜ ನೇಮಕಗೊಳಿಸಿ ಆದೇಶ.

ಬಯೋಡೆಟಾ :

ಗುಲ್ಬಾರ್ಗ ಮೂಲದ ಆಯೇಷಾ ಖಾನಂ, ಹೈಸ್ಕೂಲ್‌ ವಿದ್ಯಾಭ್ಯಾಸವನ್ನು ಹುಬ್ಬಳಿಯಲ್ಲಿ ಪೂರ್ಣಗೊಳಿಸಿದರು. ಬಳಿಕ ಅವರ ಬಹುತೇಕ ಶಿಕ್ಷಣ ಮತ್ತು ವೃತ್ತಿ ಬೆಂಗಳೂರು ನಗರದಲ್ಲಿ.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿರುವ ಆಯೇಷಾ ಖಾನಂ, ದಿ ಏಶಿಯನ್‌ ಏಜ್‌ ಪತ್ರಿಕೆ ಮೂಲಕ ವೃತ್ತಿ ಜೀವನಕ್ಕೆ ಪ್ರವೇಶ. ಬಳಿಕ  ಆಜ್‌ ತಕ್‌, ಸ್ಟಾರ್‌ ನ್ಯೂಸ್‌ ಗಳಲ್ಲಿ ಸೇವೆ. ಇದೀಗ ನ್ಯಾಷನಲ್‌ ಡಿಡಿ (ದೂರದರ್ಶನ)ದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಯೆಷಾ ಖಾನಂ.

ಸಾಮಾಜಿಕ ನ್ಯಾಯದ ಜತೆಗೆ ಸೇವಾ ಹಿರಿತನ, ಅರ್ಹತೆ, ಸಾಮರ್ಥ್ಯಕ್ಕೆ ತಕ್ಕಂತೆ ಆದ್ಯತೆ ನೀಡಲಾಗಿದೆ. ಜತೆಗೆ ಪತ್ರಿಕಾ ಛಾಯಾಗ್ರಾಹಕರನ್ನೂ ಮಾಧ್ಯಮ‌ ಅಕಾಡೆಮಿ ಸದಸ್ಯ ಸ್ಥಾನಕ್ಕೆ ಪರಿಗಣಿಸಿರುವುದೂ ಕೂಡ ಇದೇ ಮೊದಲು.

ಕೆ.ವಿ.ಪ್ರಭಾಕರ್‌  ಪ್ರಯತ್ನ:

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಸೂಚಿಸಿ ಇವರನ್ನೇ ಮಾಡುವುದು ಸೂಕ್ತ ಎನ್ನುವ ಅಭಿಪ್ರಾಯವನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಿಗೆ ವ್ಯಕ್ತಪಡಿಸಿದ್ದರು.

ಇವತ್ತಿನವರೆಗೂ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಯಾವ ಮುಖ್ಯಮಂತ್ರಿಗಳೂ ನೇಮಿಸಿಲ್ಲ. ಈ ಕೊರತೆಯನ್ನು ನೀವು ಅಳಿಸಿದಂತಾಗುತ್ತದೆ. ಜೊತೆಗೆ ಆಯೇಷಾ ಅವರು ಕಲ್ಯಾಣ ಕರ್ನಾಟಕದ ಕಲ್ಬುರ್ಗಿ ಜಿಲ್ಲೆಯವರಾಗಿರುವುದರಿಂದ ಸಾಮಾಜಿಕ ನ್ಯಾಯ, ಪ್ರಾದೇಶಿಕ ನ್ಯಾಯ, ಲಿಂಗ ಸಮಾನತೆಗೂ ಮಾನ್ಯತೆ ಕೊಟ್ಟಂತಾಗುತ್ತದೆ ಎನ್ನುವುದು ಕೆ.ವಿ.ಪ್ರಭಾಕರ್ ಅವರ ಅಭಿಪ್ರಾಯವಾಗಿತ್ತು.

ಈ ಅಭಿಪ್ರಾಯಕ್ಕೆ ಸಂಪೂರ್ಣ ಮನ್ನಣೆ ನೀಡಿದ ಮುಖ್ಯಮಂತ್ರಿಗಳು ಇತರೆ ಹಲವು ಅರ್ಹರ ಹೆಸರುಗಳ ನಡುವೆ ಆಯೇಷಾ ಅವರನ್ನು ಹೆಚ್ಚು ಅರ್ಹರು ಎಂದು ತೀರ್ಮಾನಿಸಿ ಆದೇಶ ಹೊರಡಿಸಲು ಸೂಚಿಸಿದರು.

key words: Senio journalist, from Bangalore, Ayesha Khanam, appointed, new president of, Karnataka Media Academy.

 

 

Font Awesome Icons

Leave a Reply

Your email address will not be published. Required fields are marked *