ರಾಜ್ಯದಲ್ಲಿ ಇಂದು 437 ಮಂದಿಯಲ್ಲಿ ಡೆಂಗ್ಯೂ ಕೇಸ್‌ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇಂದು 437 ಡೆಂಗ್ಯೂ ಕೇಸ್‌ಗಳು ದೃಢವಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 388ಕ್ಕೇರಿದೆ.

Ad

300x250 2

ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ 165 ಹೊಸ ಕೇಸ್‌ಗಳು ದಾಖಲಾಗಿದ್ದು, ಸದ್ಯ 91 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 2704 ಟೆಸ್ಟ್‌ ನಡೆಸಲಾಗಿದ್ದು, ಈ ಪೈಕಿ 437 ಜನರಿಗೆ ಡೆಂಗ್ಯೂ ದೃಢವಾಗಿದೆ. ಬಿಬಿಎಂಪಿ ವ್ಯಾಪಿಯಲ್ಲಿ 165, ಬೆಂಗಳೂರು ನಗರ 10, ಬೆಂ.ಗ್ರಾಮಾಂತರ 5, ರಾಮನಗರ 14, ಕೋಲಾರ 19, ಚಿಕ್ಕಬಳ್ಳಾಪುರ 7,

ತುಮಕೂರು 5, ಚಿತ್ರದುರ್ಗ 3, ದಾವಣಗೆರೆ 24, ಬೆಳಗಾವಿ 32, ಗದಗ 15, ಉತ್ತರ ಕನ್ನಡ 1, ಕಲಬುರಗಿ 20, ಬೀದರ್‌ 10, ಬಳ್ಳಾರಿ 4, ವಿಜಯನಗರ 1, ಕೊಪ್ಪಳ 3, ಮೈಸೂರು 17, ಮಂಡ್ಯ 47, ಹಾಸನ 6, ಉಡುಪಿ 10, ಚಿಕ್ಕಮಗಳೂರು 10, ಕೊಡಗು 9 ಕೇಸ್‌ ಪತ್ತೆಯಾಗಿವೆ.

ರಾಜ್ಯದಲ್ಲಿ ಡೆಂಗ್ಯೂ ಜ್ವರದಿಂದ ಜನವರಿಯಿಂದ ಈವರೆಗೆ ಒಟ್ಟು 8658 ಪ್ರಕರಣಗಳು ವರದಿಯಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಡೆಂಗ್ಯೂ ಸಾವಿನ ಪ್ರಮಾಣ ಶೇ. 0.07 ಇದೆ ಎಂಬ ಮಾಹಿತಿ ತಿಳಿದು ಬಂದಿದೆ.

Font Awesome Icons

Leave a Reply

Your email address will not be published. Required fields are marked *