ಎರಡು ಕಾರುಗಳ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು,ಜುಲೈ,15,2024 (www.justkannada.in): ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ನೈಸ್ ರಸ್ತೆಯ ಬನ್ನೇರುಘಟ್ಟ ಟೋಲ್ ಬಳಿ ನಡೆದಿದೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ  ಶಿವನಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ವಿನೋದ್,  ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಕುಮಾರ್ , ಕನಕಪುರ ತಾಲ್ಲೂಕಿನ ಕಾಳೇಗೌನದೊಡ್ಡಿ ನಿವಾಸಿ ನಂಜೇಶ್ ಮೃತಪಟ್ಟವರು.  ಘಟನೆಯಲ್ಲಿ  ಶಿವರಾಮ, ಕೃಷ್ಣ, ಪ್ರಸನ್ನ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಳೆಯಿಂದಾಗಿ ಮಹೀಂದ್ರಾ ಸ್ಕಾರ್ಪಿಯೋ ಕಾರು  ಡಿವೈಡರ್ ಗೆ ಡಿಕ್ಕಿಯಾಗಿ ನಂತರ ಎಕ್ಸ್‌ಯುವಿ 700 ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಸ್ಥಳಕ್ಕೆ ಕೆಂಗೇರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: car accident,Three died, on the spot

Font Awesome Icons

Leave a Reply

Your email address will not be published. Required fields are marked *