ವಾಹನ ಪಾರ್ಕಿಂಗ್‌ ಗೆ ವ್ಯವಸ್ಥೆಯಿದ್ದರೆ ಮಾತ್ರ ಮನೆ ನಿರ್ಮಾಣಕ್ಕೆ ಅನುಮತಿ: ನಿಯಮ ಜಾರಿಗೆ ಮುಂದಾದ ಸರ್ಕಾರ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು, ಜುಲೈ,17, 2024 (www.justkannada.in): ನಗರದಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಮಹತ್ವದ ನಿಯಮ ಜಾರಿಗೊಳಿಸಲು ಮುಂದಾಗಿದೆ.

ಈ ಕುರಿತು ವಿಧಾನಸಭೆ ಕಲಾಪದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.  ನಗರದ ಪಾರ್ಕಿಂಗ್ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಮನೆ ಕಟ್ಟುವಾಗ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಇದ್ದರೆ ಮಾತ್ರ ನಿರ್ಮಾಣಕ್ಕೆ ಅನುಮತಿ ನೀಡಬೇಕು ಎಂಬ ನಿಯಮ ಜಾರಿಗೆ ತರಲಾಗುವುದು ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಶಾಸಕ  ಎಸ್.ಆರ್.ವಿಶ್ವನಾಥ್ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವ ಪರಮೇಶ್ವರ್, ಮೂಲ ಸೌಕರ್ಯಗಳಿಗೆ ನಿಯಮ ರೂಪಿಸದಿರುವ ಹಿನ್ನೆಲೆಯಲ್ಲಿ ರಸ್ತೆ ಬದಿ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದಾರೆ, ಇದನ್ನು ತಡೆಗಟ್ಟಲು ಬಿಬಿಎಂಪಿ ಮತ್ತು ಸಾರಿಗೆ ಇಲಾಖೆ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಮನೆಕಟ್ಟುವಾಗ ವಾಹನಗಳ ಪಾರ್ಕಿಂಗ್‌ಗೆ ಸ್ಥಳ ಇದ್ದರೆ ಮಾತ್ರ ಅನುಮತಿ ನೀಡಬೇಕೆಂಬ ನಿಯಮಗಳನ್ನು ಜಾರಿಗೆ ತರಲು ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಇನ್ನು ಬೆಂಗಳೂರು ನಗರದಲ್ಲಿ 1,194 ನೋ ಪಾರ್ಕಿಂಗ್ ರಸ್ತೆಗಳಿವೆ, ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ವಸೂಲಿ ಮಾಡಲಾಗಿದೆ, 2024ರ ಜೂನ್ 3ರವರೆಗೆ  5,21,326  ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿ 5,97,00, 200 ರೂ. ದಂಡ ಸಂಗ್ರಹಿಸಲಾಗಿದೆ. ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ ಕೆಳಹಂತದ ಸಿಬ್ಬಂದಿ ಮಾತ್ರವಲ್ಲದೇ ಸಂಚಾರ ವಿಭಾಗದ ಡಿಸಿಪಿ ಮತ್ತು ಎಸಿಪಿಗಳು ಬೆಳಗ್ಗೆ ಮತ್ತು ಸಂಜೆ ಕನಿಷ್ಠ 2 ತಾಸು ಬೀಟ್ ನಡೆಸುವಂತೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.

Key words: Permission, build, houses, parking, Minister, Parameshwar

Font Awesome Icons

Leave a Reply

Your email address will not be published. Required fields are marked *