ನವದೆಹಲಿ,ಜುಲೈ,18,2024 (www.justkannada.in): ಜುಲೈ 20 ಶನಿವಾರದೊಳಗೆ ನೀಟ್ –ಯುಜಿ ಪರೀಕ್ಷೆಯ ಫಲಿತಾಂಶವನ್ನ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಜುಲೈ 20ರ ಮಧ್ಯಾಹ್ನ 12 ಗಂಟೆಯೊಳಗೆ ತನ್ನ ಆನ್ ಲೈನ್ ನಲ್ಲಿ ಫಲಿತಾಂಶವನ್ನ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಅದೇ ವೇಳೆ ಅಭ್ಯರ್ಥಿಗಳ ಗುರುತನ್ನು ಬಹಿರಂಗಪಡಿಸದೆ, ನಗರವಾರು, ಕೇಂದ್ರವಾರು ಫಲಿತಾಂಶವನ್ನು ಪ್ರಕಟಿಸಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ತಿಳಿಸಿದೆ.
ಇನ್ನು ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರಕ್ಕೆ ಮುಂದೂಡಿಕೆ ಮಾಡಿದೆ. ಜುಲೈ 24 ರಂದು ಪದವಿಪೂರ್ವ ವೈದ್ಯಕೀಯ ಕೌನ್ಸೆಲಿಂಗ್ ಆರಂಭವಾಗಲಿದೆ ಎಂದು ಎನ್‌ಟಿಎ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
Key words: NEET, Result, announce, Supreme court