ನವದೆಹಲಿ,ಜುಲೈ,19,2024 (www.justkannada.in): ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ ಸೇರಿ ಹಲವು ರಾಜ್ಯಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕದ ದಕ್ಷಿಣ ಭಾಗ, ಕರಾವಳಿ ಕರ್ನಾಟಕ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ತೆಲಂಗಾಣ, ಗುಜರಾತ್, ಆಂಧ್ರ ಪ್ರದೇಶದ ಕರಾವಳಿ, ಯಾನಂ, ವಿದರ್ಭ, ಛತ್ತೀಸ್ ಗಢ ಮತ್ತು ಒಡಿಶಾದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಕೇರಳ, ಮಾಹೆ, ತಮಿಳುನಾಡಿನಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯಿಂದ ಮುಂಬೈನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಜುಲೈ 20ರವರೆಗೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇಂದು ಮತ್ತು ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
Key words: Heavy rains, Karnataka, Red alert