ಬೆಂಗಳೂರು,ಜುಲೈ,24,2024 (www.justkannada.in): ಮುಡಾ ಹಗರಣದ ಬಗ್ಗೆ ಸದನದಲ್ಲಿ ಚರ್ಚಿಸಲು ಸ್ಪೀಕರ್ ಅವಕಾಶ ನೀಡದ ಹಿನ್ನೆಲೆಯಲ್ಲಿ ವಿಧಾನಸಭೆ ಮತ್ತು ವಿಧಾನಪರಿಷತ್ ನಲ್ಲಿ ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
ಈ ಕುರಿತು ಮಾತನಾಡಿದ ಆರ್ ಅಶೋಕ್ , ಮೂಡಾ ಹಗರಣದಲ್ಲಿ ಸರ್ಕಾರ ಹೆದರಿ ಓಡಿ ಹೋಗಿದೆ. ಹೇಡಿಗಳಂತೆ ಸರ್ಕಾರದ ನಡೆದುಕೊಳ್ಳುತ್ತಿದೆ. 14 ಮೂಡ ಸೈಟ್ ನ್ಯಾಯವಾಗಿ ತೆಗೆದುಕೊಂಡಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಸದನದಲ್ಲಿ ಹೇಳಬೇಕು. ಕೇವಲ ಹೊರಗಡೆ ಸಿಎಂ ಹೇಳುವುದಲ್ಲ. ದಲಿತರ ಜಾಗವನ್ನ ಲೂಟಿ ಹೊಡೆಯುವ ಕೆಲಸ ಆಗಿದೆ. ಸಿದ್ದರಾಮಯ್ಯ ಡಿಸಿಎಂ, ಸಿಎಂ ಆಗಿದ್ದಾಗ ಮೂಡ ಹಗರಣ ಆಗಿದೆ. ದಲಿತರ ಜಮೀನು ಲೂಟಿ ಹೊಡೆದು ದಲಿತ ಸಮುದಾಯಕ್ಕೆ ಸಿದ್ದರಾಮಯ್ಯ ಅನ್ಯಾಯ ಮಾಡಿದ್ದಾರೆ ಎಂದು ಕಿಡಿಕಾರಿದರು.
ಇಂತಹ ಹಗರಣ ಬಗ್ಗೆ ಧ್ವನಿ ಎತ್ತಲು ಅವಕಾಶ ಕೊಡುತ್ತಿಲ್ಲ. ಸ್ಪೀಕರ್ ಪೀಠಕ್ಕೆ ಅಗೌರವ ತೋರುತ್ತಿದ್ದಾರೆ. ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಸ್ಪೀಕರ್ ಮಾಡುತ್ತಿದ್ದಾರೆ. ಮೂಡ ಹಗರಣದ ಬಗ್ಗೆ ಮಾತನಾಡಿದ್ರೆ ಸಿಎಂ ಮಾನ ಮರ್ಯಾದೆ ಹೋಗುತ್ತೆ ಎಂದು ಸ್ಪೀಕರ್ ಚರ್ಚೆಗೆ ಅವಕಾಶ ಕೊಡುತ್ತಿಲ್ಲ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದರು.
Key words: discussion, Muda scam, BJP, JDS, protest