ಪ್ರಧಾನಿ ಮೋದಿ ಭೇಟಿಯಾಗಿ ಚರ್ಚಿಸಿದ ಡಿಸಿಎಂ ಡಿ.ಕೆ ಶಿವಕುಮಾರ್ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್





ನವದೆಹಲಿ, ಜುಲೈ, 31,2024 (www.justkannada.in):  ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ನವದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಈ ಬಾರಿ ಕೇಂದ್ರ ಬಜೆಟ್​ ನಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ಸಿಕ್ಕಿಲ್ಲ. ಹೀಗಾಗಿ ಬೆಂಗಳೂರು ಅಭಿವೃದ್ಧಿ ಯೋಜನೆ ಬಗ್ಗೆ ಪ್ರಧಾನಿ ಮೋದಿ ಜತೆ ಚರ್ಚೆ ನಡೆಸಿದ್ದೇನೆ. ಗಿಫ್ಟ್​​ ಸಿಟಿ’ ಬಗ್ಗೆ ಮಾತನಾಡಿದ್ದಾಗ ಅದನ್ನು ನೀಡಲ್ಲ ಎಂದಿದ್ದರು. ಹೀಗಾಗಿ ಬೇರೆ ಅಭಿವೃದ್ಧಿ ಯೋಜನೆಗಳಿಗೆ ನೆರವು ನೀಡುವಂತೆ ಮನವಿ ಮಾಡಲಾಗಿದೆ ಎಂದರು.

ಇನ್ನು ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆಯೂ ಚರ್ಚಿಸಲಾಗಿದೆ. ಬಜೆಟ್​​​ ನಲ್ಲಿ ಘೋಷಿಸಲಾಗಿದ್ದ ಭದ್ರಾ ಮೇಲ್ಡಂಡೆ ಯೋಜನೆಯ ಹಣ ಬಂದಿಲ್ಲ. ಹೀಗಾಗಿ ಈ ಬಗ್ಗೆ ಪ್ರಸ್ತಾಪಿಸಿದ್ದು, ಪರಿಶೀಲಿಸುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ ಎಂದರು.

Key words: DCM, DK Shivakumar, met, PM Modi






Previous articleಸಿಎಂ ‌ಸೂಚನೆ ಮೇರೆಗೆ ವಯನಾಡಿಗೆ ತೆರಳಿದ ಸಚಿವ ಸಂತೋಷ್ ಲಾಡ್


Font Awesome Icons

Leave a Reply

Your email address will not be published. Required fields are marked *