ಕರಾಮುವಿಯಿಂದ ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್





ಮೈಸೂರು,ಜುಲೈ,31,2024 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರ ಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ(ಜೆಆರ್‌ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಆಸಕ್ತರು ದಿನಾಂಕ:09.08.2024ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದೆಂದು ಕರಾಮುವಿ ಕುಲಸಚಿವ ಪ್ರೊ. ಕೆ.ಬಿ. ಪ್ರವೀಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ 0821-2515944 ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ.

Key words: KSOU, Coaching, K-SET, UGC-NET Exams






Previous articleಕೇರಳ ಭೂ ಕುಸಿತ ದುರಂತ: ಗಾಯಾಳುಗಳ ನೋವಿಗೆ ಸ್ಪಂದಿಸಲು ಮುಂದಾದ ಮೈಸೂರು ಜಿಲ್ಲಾಡಳಿತ


Font Awesome Icons

Leave a Reply

Your email address will not be published. Required fields are marked *