ಮೈಸೂರು,ಸೆಪ್ಟಂಬರ್,3,2024 (www.justkannada.in): ಚಾಮುಂಡೇಶ್ವರಿ ಪ್ರಾಧಿಕಾರ ಸಮಿತಿ ರಚನೆ ಸಂಬಂಧಿಸಿದಂತೆ ಸರ್ಕಾರ ಮತ್ತು ರಾಜಮನೆತನ ನಡುವೆ ಜಟಾಪಟಿ ಮುಂದುವರೆದಿದ್ದು, ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಪ್ರಾಧಿಕಾರದ ಸಭೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಚಾಮುಂಡಿಬೆಟ್ಟದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚಾಮುಂಡೇಶ್ವರಿ ಪ್ರಾಧಿಕಾರ ಸಮಿತಿ ಸಭೆ ನಡೆಯಲಿದೆ. ಸಭೆ ಹಿನ್ನೆಲೆ ಪ್ರಾಧಿಕಾರದ ಕಾರ್ಯದರ್ಶಿಯು ಮೇಲ್ ಮೂಲಕ ರಾಜವಂಶಸ್ಥೆ ಪ್ರಮೋದಾದೇವಿ ಅವರಿಗೆ ಪತ್ರ ಬರೆದುಸಭೆಗೆ ಹಾಜರಾಗುವಂತೆ ಮನವಿ ಮಾಡಿದ್ದರು.
ಮೇಲ್ ಮೂಲಕವೇ ಪ್ರಾಧಿಕಾರಕ್ಕೆ ಪ್ರತ್ಯುತ್ತರ ನೀಡಿದ ಪ್ರಮೋದಾದೇವಿ ಒಡೆಯರ್, ಸಭೆ ಕಾನೂನು ಬಾಹಿರವಾಗಿ ನಡೆಯುತ್ತಿದೆ. ನ್ಯಾಯಾಲಯದ ವಿರುದ್ಧ ಸಭೆ ನಡೆಸುತ್ತಿರುವುದು ಸರಿಯಲ್ಲ. ಕಾನೂನು ಉಲ್ಲಂಘನೆ ಆಗಲಿದೆ ಎಂದ ಸೂಕ್ಷ್ಮ ಎಚ್ಚರಿಕೆ ನೀಡಿದ್ದಾರೆ.
ಸೆಪ್ಟಂಬರ್ 5ಕ್ಕೆ ನ್ಯಾಯಾಲಯದಲ್ಲಿ ಮುಂದುವರಿದ ವಿಚಾರಣೆ ಇದೆ ಹೀಗಿರುವಾಗ ಸಭೆ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಮೋದಾದೇವಿ ಒಡೆಯರ್ ಪ್ರಶ್ನೆ ಮಾಡಿದ್ದಾರೆ. ಹೀಗಾಗಿ ಸಭೆಗೆ ಗೈರಾಗಲು ಪ್ರಮೋದಾದೇವಿ ಒಡೆಯರ್ ನಿರ್ಧಾರ ಮಾಡಿದ್ದಾರೆ.
ಪ್ರಾಧಿಕಾರ ರಚನೆಗೆ ಪ್ರಮೋದಾದೇವಿ ಒಡೆಯರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಚಾಮುಂಡೇಶ್ವರಿ ಬೆಟ್ಟ ನಮ್ಮ ಆಸ್ತಿ ಎಂದು ಪ್ರತಿಪಾದನೆ ಮಾಡಿದ್ದಾರೆ.
Key words: Pramodadevi Wodeyar, opposed, Chamundeshwari Authority Committee, meeting