ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.12ಕ್ಕೆ ಮುಂದೂಡಿಕೆ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು ,ಸೆಪ್ಟಂಬರ್,9,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ  ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ  ವಿಚಾರಣೆಯನ್ನ ಹೈಕೋರ್ಟ್ ಸೆಪ್ಟಂಬರ್ 12ಕ್ಕೆ ಮುಂದೂಡಿಕೆ ಮಾಡಿದೆ.

ಇಂದು ಹೈಕೋರ್ಟ್ ನ್ಯಾ. ಎಂ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದಲ್ಲಿ ರಿಟ್ ಅರ್ಜಿಯ ವಿಚಾರಣೆ ನಡೆದಿದ್ದು, ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.  17 Aಅಡಿ ಪ್ರಾಸಿಕ್ಯೂಷನ್ ಗೆ ಪೊಲೀಸರು ಅನುಮತಿ ಕೇಳಬಹುದು. ಅದಕ್ಕೂ ಮೊದಲು ತನಿಖಾಧಿಕಾರಿ ಪ್ರಾಥಮಿಕ ತನಿಖೆ ನಡೆಸಬೇಕು. ಪ್ರಾಥಮಿಕ ತನಿಖೆಯ ವಿವರವನ್ನು ಸಕ್ಷಮ ಪ್ರಾಧಿಕಾರಕ್ಕೆ ನೀಡಬೇಕು ಎಂದು ಲಲಿತಾ ಕುಮಾರಿ ಪ್ರಕರಣವನ್ನು ಎಜಿ ಶಶಿಕಿರಣ್ ಶೆಟ್ಟಿ ತಿಳಿಸಿದರು.

ರಾಜ್ಯಪಾಲರು ತನಿಖಾಧಿಕಾರಿಯಿಂದ ವರದಿ ಪಡೆಯಬೇಕಿತ್ತು. ಸರ್ಕಾರಕ್ಕೆ ಶೋಕಾಸ್ ನೋಟಿಸ್ ನೀಡುವ ಬದಲು ವರದಿ ಪಡೆಯಬೇಕಿತ್ತು. ವರದಿಯ ಬಲವಿಲ್ಲದೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ 17ಎರ ಮಾರ್ಗಸೂಚಿ ಆಧರಿಸಿ ಎಜಿ ಶಶಿಕುಮಾರ್ ಶೆಟ್ಟಿ ವಾದ ಮಂಡನೆ ಮಾಡಿದರು.

ಸಿಎಂ ತಪ್ಪು ಮಾಡಿದ್ದಾರೆ ಎಂಬುದಕ್ಕೆ ದಾಖಲೆ ಇಲ್ಲ. ತರಾತುರಿಯಲ್ಲಿ ಗವರ್ನರ್ ಬಳಿ ತನೊಖೆಗೆ  ಅನುಮತಿ ನೀಡಲಾಗಿದೆ ಎಂದರು. ಈ ವೇಳೆ ಖಾಸಗಿ ದೂರುದಾರರಿಗೆ ಇದು ಅನ್ವಯವಾಗಲ್ಲ ಎಂದು ಜಡ್ಜ್  ಪ್ರಶ್ನಿಸಿದ್ದು,  ದೂರು ನೀಡಿದ ನಂತರ 15  ದಿನಗಳಿಂದ 6 ವಾರಗಳ ಕಾಲ ಸಮಯ ಇರುತ್ತೆ.  ಸಿಎಂ ಪ್ರಕರಣದಲ್ಲಿ ಕಾಲಾವಕಾಶ ನೀಡದೇ ದೂರು ನೀಡಲಾಗಿದೆ ಎಂದು ವಾದಿಸಿದರು.

ವಿಚಾರಣೆಯನ್ನ ಕೋರ್ಟ್ ಸೆಪ್ಟಂಬರ್ 12ಕ್ಕೆ ಮುಂದೂಡಿಕೆ ಮಾಡಿದ್ದು ಅಂದು ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮಾಡುವ ಸಾಧ್ಯತೆ ಇದೆ.

Key words: CM Siddaramaiah, hearing, adjourned, high court

Font Awesome Icons

Leave a Reply

Your email address will not be published. Required fields are marked *