ಕೊಲ್ಕತ್ತಾ: ಆರ್‌ಜಿ ಕರ್ ಆಸ್ಪತ್ರೆ ವೈದ್ಯರ ಕೊಲೆ ಪ್ರಕರಣದಲ್ಲಿ ಜನರಿಗೆ ಅನುಕೂಲವಾಗುವುದಾದರೆ ಮತ್ತು ನ್ಯಾಯವನ್ನು ಖಚಿತಪಡಿಸಿದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ಆರ್‌ಜಿ ಕಾರ್ ಬಿಕ್ಕಟ್ಟಿಗೆ ಇಂದು ಅಂತ್ಯವನ್ನು ನಿರೀಕ್ಷಿಸಿದ್ದ ಬಂಗಾಳದ ಜನರಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಅವರು(ಕಿರಿಯ ವೈದ್ಯರು) ಸಭೆಗೆ ಕುಳಿತುಕೊಳ್ಳಲಿಲ್ಲ. ಕೆಲಸಕ್ಕೆ ಹಿಂತಿರುಗಲು ನಾನು ಅವರನ್ನು ವಿನಂತಿಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನನ್ನ ಮನವಿ, ಉತ್ತಮ ಉದ್ದೇಶ ಮತ್ತು ಪ್ರಯತ್ನಗಳ ಹೊರತಾಗಿಯೂ, ವೈದ್ಯಾಧಿಕಾರಿಗಳು ಮಾತುಕತೆ ನಡೆಸಲು ನಿರಾಕರಿಸಿದ್ದರಿಂದ ನಾನು ಜನರ ಹಿತದೃಷ್ಟಿಯಿಂದ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.
ರಾಜೀನಾಮೆಗೆ ಸಿದ್ಧವೆಂದ ಮಮತಾ ಬ್ಯಾನರ್ಜಿ, ಮುಖ್ಯಮಂತ್ರಿ ಹುದ್ದೆಗೆ ನಾನು ಜೋತುಬಿದ್ದಿಲ್ಲ. ನನ್ನ ಉದ್ದೇಶ ನ್ಯಾಯ ಕೊಡಿಸುವುದಾಗಿದೆ ಎಂದು ಹೇಳಿದ್ದಾರೆ.