ದ್ವಿತೀಯ PU ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷಾ ಅವಧಿ 15 ನಿಮಿಷ ಕಡಿತ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು, ಸೆಪ್ಟೆಂಬರ್, 13,2024 (www.justkannada.in):  ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೊಂದು ಸರ್ಕಾರ ಶಾಕಿಂಗ್ ನ್ಯೂಸ್ ನೀಡಿದ್ದು ಪರೀಕ್ಷಾ ಅವಧಿಯನ್ನ 15 ನಿಮಿಷಗಳ ಕಾಲ ಕಡಿತ ಮಾಡಿ ಆದೇಶ ಹೊರಡಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯ ಅವಧಿಯನ್ನು 15 ನಿಮಿಷಗಳ ಕಾಲ ಇಳಿಕೆ ಮಾಡುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಆದೇಶ ಹೊರಡಿಸಿದೆ. ಇದರಿಂದಾಗಿ, 3 ಗಂಟೆಗಳ ಕಾಲ ಬರೆಯಬೇಕಿದ್ದ ಪರೀಕ್ಷೆ ಅವಧಿ 2 ಗಂಟೆ 45 ನಿಮಿಷಕ್ಕೆ ಇಳಿಕೆಯಾಗಲಿದೆ. ಈ ಮೂಲಕ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆ ಬರೆಯುವ ಸಮಯದ ಅವಧಿ ಕಡಿಮೆಯಾಗಲಿದೆ.

ಈ ಶೈಕ್ಷಣಿಕ ವರ್ಷದಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಮಂಡಳಿ  ತಿಳಿಸಿದ್ದು, ಆದರೆ, ಪರೀಕ್ಷೆಯ ಅವಧಿ ಕಡಿತವಾದರೂ ವಿದ್ಯಾರ್ಥಿಗಳು ಪರೀಕ್ಷಾ ಹಾಲ್ ​​ನಲ್ಲಿ ಮೂರು ಗಂಟೆ ಇರಲೇಬೇಕಾಗುತ್ತದೆ. ಪರೀಕ್ಷೆಯ ಆರಂಭದ 15 ನಿಮಿಷವನ್ನು ಪ್ರಶ್ನೆಗಳನ್ನು ಓದಿಕೊಳ್ಳಲು ಬಳಸಲು ಅವಕಾಶ ನೀಡಲಾಗುತ್ತದೆ.

ಲಿಖಿತ ಬರವಣಿಗೆಗೆ ಮಾತ್ರ 2 ಗಂಟೆ 45 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ 100 ಅಂಕಕ್ಕೆ ಬದಲು 80 ಅಂಕಕ್ಕೆ ಪರೀಕ್ಷೆ ಬರೆಯುವಂತೆ ಮಾಡಲಾಗುತ್ತದೆ. ಈ ಹಿಂದೆಯೂ 3 ಗಂಟೆ ಅವಧಿಯ ಪರೀಕ್ಷೆ ಇದ್ದಾಗಲೂ ಪ್ರಶ್ನೆಗಳನ್ನು ಓದಿಕೊಳ್ಳಲು 15 ನಿಮಿಷವನ್ನು ಹೆಚ್ಚುವರಿಯಾಗಿ ಕೊಡಲಾಗುತ್ತಿತ್ತು.

Key words: 2nd PUC, student, exam duration, reduced

Font Awesome Icons

Leave a Reply

Your email address will not be published. Required fields are marked *