ಪಾರ್ತಿಸುಬ್ಬ ಪ್ರಶಸ್ತಿಗೆ ಯಕ್ಷಗುರು ಬನ್ನಂಜೆ ಸಂಜೀವ ಸುವರ್ಣ ಆಯ್ಕೆ

ಉಡುಪಿ: ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರನ್ನು 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ನವೆಂಬರ್ ತಿಂಗಳಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪದಾನ ಮಾಡಲಾಗುವುದು. ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ನಗದು, ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ ಎಂದರು.

2023ನೇ ಸಾಲಿನ ಗೌರವ ಪ್ರಶಸ್ತಿಗೆ ಭಾಗವತರಾದ ದಿನೇಶ್ ಅಮ್ಮಣ್ಣಾಯ, ನಾರಾಯಣಪ್ಪ ಎ.ಆರ್., ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ, ಅರ್ಥಧಾರಿ ಎಂ.ಜಬ್ಬಾರ್ ಸಮೋ ಹಾಗೂ ವೇಷಧಾರಿ ಚೆನ್ನಪ್ಪಗೌಡ ಸಚಿಪ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ 50 ಸಾವಿರ ನಗದು, ಫಲಕ ಒಳಗೊಂಡಿದೆ. ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ರಘುನಾಥ ಶೆಟ್ಟಿ ಬಾಯಾರು, ದಿವಾಕರ್ ದಾಸ್ ಕಾವಳಕಟ್ಟೆ, ಸುಬ್ರಾಯ ಪಾಟಾಳಿ ಸಂಪಾಜೆ, ನರಾಡಿ ಭೋಜರಾಜ ಶೆಟ್ಟಿ, ಸದಾನಂದ ಪ್ರಭು, ಹೊಳೆಮಗೆ ನಾಗಪ್ಪ ಮರಕಾಲ, ಶಿರಳಗಿ ತಿಮ್ಮಪ್ಪ ಹೆಗಡೆ, ಬಾಬು ಕುಲಾಲ್ ಹಳ್ಳಾಡಿ, ಶಿವಯ್ಯ, ಜೀಯಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ನಮ್ರತ ಎನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಅಕಾಡೆಮಿ ಸದಸ್ಯರಾದ ಸುಧಾಕರ್ ಶೆಟ್ಟಿ ಉಳ್ಳಾಲ್, ವಿದ್ಯಾಧರ ಜಲವಳ್ಳಿ ಉಪಸ್ಥಿತರಿದ್ದರು.

Font Awesome Icons

Leave a Reply

Your email address will not be published. Required fields are marked *