ಮುಜರಾಯಿ ದೇವಾಲಯಗಳಲ್ಲಿ ‘ನಂದಿನಿ ತುಪ್ಪ’ ಬಳಕೆ ಕಡ್ಡಾಯ: ಸರ್ಕಾರದಿಂದ ಸುತ್ತೋಲೆ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್





ಬೆಂಗಳೂರು, ಸೆಪ್ಟೆಂಬರ್​ 20,2024 (www.justkannada.in):  ತಿರುಪತಿ ಲಡ್ಡುವನ್ನು ತಯಾರಿಸಲು ಪ್ರಾಣಿಗಳು ಕೊಬ್ಬು ಬಳಕೆ ಮಾಡಲಾಗುತ್ತಿತ್ತು  ಎಂದು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ನೀಡಿದ್ದ ಸ್ಫೋಟಕ ಹೇಳಿಕೆ ಬೆನ್ನೆಲ್ಲೆ ಟಿಟಿಡಿ ಎಕ್ಸಿಕ್ಯೂಟಿವ್ ಅಧಿಕಾರಿ ಶ್ಯಾಮಲಾ ರಾವ್, ಲಡ್ಡು ತಯಾರಿಕೆಗೆ ಕಲಬೆರಕೆ ತುಪ್ಪ ಬಳಸಿರುವುದು ನಿಜ. ಇದೀಗ ಇದರ ಎಫೆಕ್ಟ್ ಕರ್ನಾಟಕಕ್ಕೂ ತಟ್ಟಿದೆ. ಕರ್ನಾಟಕದಲ್ಲಿ ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡಬೇಕು  ಎಂದು ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮುಜರಾಯಿ & ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆಯ ಮೇರೆಗೆ ಸುತ್ತೋಲೆ ಹೊರಡಿಸಿರುವ ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಲಾಗಿದೆ.

ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬುವುದನ್ನ ಟಿಟಿಡಿ ಒಪ್ಪಿಕೊಂಡಿದೆ. ರುಪತಿಯಲ್ಲಿ ತಯಾರಾಗುವ ಲಡ್ಡುವಿಗೆ ಬಳಸುವ ತುಪ್ಪದ ಮಾದರಿ ಪರೀಕ್ಷೆ ನಡೆಸಲಾಗಿದೆ. ಆ ತುಪ್ಪದಲ್ಲಿ ಮೀನಿನ ಎಣ್ಣೆ, ಪಾಮ್ ಆಯಿಲ್ ಪತ್ತೆಯಾಗಿದೆ. ದನದ ಮಾಂಸದಿಂದ ತೆಗೆದ ಕೊಬ್ಬು, ಹಂದಿ ಮಾಂಸದ ಪದರದಿಂದ ತೆಗೆದ ಬಿಳಿ ಕೊಬ್ಬು ತುಪ್ಪದಲ್ಲಿ ಇರುವುದು ಕೂಡ ಬೆಳಕಿಗೆ ಬಂದಿದೆ.

Key words: Use, Nandini Ghee, mandatory, Mujarai temples






Previous articleಕೋವಿಡ್ ಹಗರಣ: ಯಾರಾದ್ರು ತಪ್ಪು ಮಾಡಿದ್ರೆ ಶಿಕ್ಷೆ ಕೊಡಲಿ- ಸಂಸದ ಡಾ.ಕೆ.ಸುಧಾಕರ್


Font Awesome Icons

Leave a Reply

Your email address will not be published. Required fields are marked *