ಎಲೆಕ್ಟ್ರಾನಿಕ್‌ ಮಾಧ್ಯಮಗಳ ಕಿವಿ ಹಿಂಡಿ, ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಎಚ್ಚರಿಕೆ ನೀಡಿದ ಸಿಎಂ..! » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


 

ಮೈಸೂರು ಸೆ 21,2024: (www.justkannada.in news) ಸುಳ್ಳಿನ ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ.  ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.‌

ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದರು.

ವಾಕ್ ಸ್ವಾತಂತ್ರ್ಯ ನಮಗೆ ನಮ್ಮ‌ ಸಂವಿಧಾನ ನೀಡಿರುವ ಅತ್ಯುನ್ನತ ಮೌಲ್ಯ. ಸಂವಿಧಾನದ ಮೂರು ಅಂಗಗಳಿಗೆ ಅಪಾಯ ಬಂದರೆ ಸಮಾಜಕ್ಕೆ ಅಪಾಯ ಬಂದಂತೆ. ವಾಕ್ ಸ್ವಾತಂತ್ರ್ಯ ಆಚರಿಸುವ ಪತ್ರಿಕಾ ರಂಗಕ್ಕೆ ಯಾವ ನಿರ್ಬಂಧಗಳೂ ಇರಬಾರದು ಎನ್ನುವುದನ್ನು ಪಂಡಿತ್ ನೆಹರೂ ಅವರೂ ಬಹಳ ಒತ್ತಿ ಹೇಳಿದ್ದರು ಎಂದು ವಿವರಿಸಿದರು.

ಸುಳ್ಳು ಸುದ್ದಿಗಳ ಅನಾಹುತಗಳಿಗೆ ಉದಾಹರಣೆ ನೀಡಿದ ಮುಖ್ಯಮಂತ್ರಿಗಳಯ, “ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಡಿದ ಮಾತನ್ನು ನಾನು ಉದಾಹರಿಸಿದ್ದೆ. ” ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ” ಎಂದು ಯಡಿಯೂರಪ್ಪ ಅವರು ಸದನದಲ್ಲೇ ಹೇಳಿದ್ದರು. ಈ ಮಾತನ್ನು ನಾನು ಉದಾಹರಿಸಿದ್ದೆ. ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ನಾನೇ ಆ ಮಾತು ಹೇಳಿದ್ದಾಗಿ ನಕಲಿ‌ ಸುದ್ದಿ ಸೃಷ್ಟಿಸಿ, ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೆರೆಸಿ ತಪ್ಪು ಸಂದೇಶ ಹರಡಿದರು. ಇದರಿಂದ ನಷ್ಟ ಆಗಿದ್ದು ಸಮಾಜಕ್ಕೇ ಹೊರತು ನನಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ನಾವು ಕಾನೂನು ಮಾಡಿದ್ದೇವೆ. ಆದರೆ ಕೇವಲ ಕಾನೂನಿನಿಂದ ಮಾತ್ರ ಫೇಕ್ ನ್ಯೂಸ್ ತಡೆಯಲು ಸಾಧ್ಯವಿಲ್ಲ. ಇಡೀ ಸಮಾಜ ಇದರ ವಿರುದ್ಧ ಧ್ವನಿ ಎತ್ತಿದರೆ ಮಾತ್ರ ಸಾಧ್ಯ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರರಾದ ಕೆ.ವಿ.ಪ್ರಭಾಕರ್, ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಪುಷ್ಪಾ ಅಮರನಾಥ್, ಶಾಸಕರಾದ ರವಿಶಂಕರ್, ತನ್ವೀರ್ ಸೇಠ್, ನ್ಯೂಸ್ ಫಸ್ಟ್ ಸಿಇಒ ರವಿಕುಮಾರ್ ಉಪಸ್ಥಿತರಿದ್ದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ದೀಪಕ್‌ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾಸ್ಥ ಸಮಾಜದ ಆರೋಗ್ಯಕ್ಕಾಗಿ ಪತ್ರಕರ್ತರು ದುಡಿಯುತ್ತಿದ್ದಾರೆ. ಇಂಥ ಪತ್ರಕರ್ತರಿಗೆ  ಆರೋಗ್ಯ ರಕ್ಷಣೆಯ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸರಕಾರ ಗಮನ ಹರಿಸಬೇಕು ಎಂದರು.

ಪ್ರಸ್ತುತ ಗಾಂಧಿಯುಗ ವರ್ಸಸ್‌  ಗಾಂಧಿ ನೋಟು, ಬುದ್ಧಿಮತ್ತೆವರ್ಸಸ್‌  ಕೃತಕ ಬುದ್ಧಿಮತ್ತೆ ಹಾಗೂ ಅಂಬೇಡ್ಕರ್‌ ರ ಅಸಮಾನತೆ ವರ್ಸಸ್ ಅಸಹಿಷ್ಣುತೆ‌ ಜತೆಗೆ ಮಾಧ್ಯಮ ಸಂಸ್ಥೆಗಳು ಹಾಗೂ ಪತ್ರಕರ್ತರ ಸಂಘಗಳು ಹೋರಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದೆ ಎಂದು ಮಾರ್ಮಿಕವಾಗಿ ನುಡಿದರು.

ಮೈಸೂರಿಗೆ ನೂತನ ಜಿಲ್ಲಾಧಿಕಾರಿ ಕಚೇರಿ, ಜಯದೇವ ಹೃದ್ರೋಗ ಸಂಸ್ಥೆ, ಸೂಪರ್‌ ಸ್ಪೇಷಾಲಿಟಿ ಆಸ್ಪತ್ರೆ, ಮಹಾರಾಣಿ ಕಾಲೇಜುಗಳನ್ನು ಮಂಜೂರು ಮಾಡಿ ನವ ಮೈಸೂರು ನಿರ್ಮಾತೃ ಎನಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೂ ಆರ್ಥಿಕ ನೆರವು ನೀಡುವಂತೆ ದೀಪಕ್‌ ಮನವಿ ಮಾಡಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಾಕ್ಷ ರವಿ ಪಾಂಡವಪುರ ಕಾರ್ಯಕ್ರಮದ ನಿರೂಪಣೆ ಮಾಡಿದರೆ, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ ಗಣ್ಯರನ್ನು ಸ್ವಾಗತಿಸಿದರು.

key words: CM Siddaramaiah, squeezing, the ears of, electronic media, warns, fake news creators.

 

Font Awesome Icons

Leave a Reply

Your email address will not be published. Required fields are marked *