ಕೋಲಾರ‌ದ ಎಪಿಎಂಸಿ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ

ಕೋಲಾರ‌: ಇಲ್ಲಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ಸೋಮಣ್ಣ ಎಂಬವರಿಗೆ ಸೇರಿದ ಮಂಡಿಯಲ್ಲಿ ಈ ಘಟನೆ ನಡೆದಿದೆ. ನೋಡನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆಯು ಮುಗಿಲೆತ್ತರಕ್ಕೆ ವ್ಯಾಪಿಸಿದ್ದು, ಧಗ ಧಗನೆ ಹೊತ್ತಿ ಉರಿದಿದೆ.

ಸುಮಾರು 1000 ಕ್ಕೂ ಹೆಚ್ಚು ಟೊಮೆಟೋ ಕ್ರೇಟ್ ಗಳು ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Font Awesome Icons

Leave a Reply

Your email address will not be published. Required fields are marked *