ಕಿತ್ತೂರು ವಿಜಯೋತ್ಸವ – ವಿಜಯ ಜ್ಯೋತಿಯಾತ್ರೆಗೆ ಜಿಲ್ಲಾಧಿಕಾರಿಗಳಿಂದ ಮಾಲಾರ್ಪಣೆ

ಉಡುಪಿ: ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ 200 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಕಿತ್ತೂರಿನಲ್ಲಿ ಹಮ್ಮಿಕೊಂಡಿರುವ ಉತ್ಸವದ ಭಾಗವಾದ ಕಿತ್ತೂರು ವಿಜಯೋತ್ಸವ ವಿಜಯ ಜ್ಯೋತಿಯಾತ್ರೆಯನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಇಂದು ಉಡುಪಿಯ ಪ್ರವಾಸಿ ಮಂದಿರದಲ್ಲಿ ಸ್ವಾಗತಿಸಿ ರಾಣಿ ಚೆನ್ನಮ್ಮ ಪುತ್ತಳಿಗೆ , ಪುಷ್ಪ ಹಾರಾರ್ಪಣೆಗೈದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ನಗರ ಸಭೆ ಆಯುಕ್ತ ರಾಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಜಿಲ್ಲಾ ಹಿಂದುಳಿದ ಇಲಾಖೆ ಅಧಿಕಾರಿ ಹಾಕಪ್ಪ ಲಮಾಣಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಾರ್ಯದರ್ಶಿಗಳಾದ ಸುಬ್ರಮಣ್ಯ ಶೆಟ್ಟಿ, ನರೇಂದ್ರ ಕುಮಾರ್ ಕೋಟ, ತಾಲೂಕು ಕ. ಸಾ. ಪ ಅಧ್ಯಕ್ಷರಾದ ರವಿರಾಜ್ ಎಚ್. ಪಿ, ಡಾ.ಉಮೇಶ್ ಪುತ್ರನ್, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳಾದ ನರಸಿಂಹ ಮೂರ್ತಿ, ದಿವಾಕರ ಶೆಟ್ಟಿ, ಭುವನಪ್ರಸಾದ್, ರಂಜಿನಿ, ಜಗನ್ನಾಥ ಪಣಸಾಲೆ, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದ ಬಸಯ್ಯ ಸ್ವಾಮಿ ಚಿಕ್ಕಮಠ, ವಿವಿಧ ಇಲಾಖೆಯ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Font Awesome Icons

Leave a Reply

Your email address will not be published. Required fields are marked *