ಇಂದಿನಿಂದ ಟೀಮ್ ಇಂಡಿಯಾ, ಬಾಂಗ್ಲಾದೇಶದ ನಡುವಿನ 5 ಪಂದ್ಯಗಳ ಟಿ20 ಸರಣಿ ಶುರುವಾಗಲಿದೆ. ಗ್ವಾಲಿಯರ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ ಮೊದಲ ಟಿ20 ಪಂದ್ಯ ನಡೆಯಲಿದೆ.
ಪಂದ್ಯಕ್ಕೂ ಮುನ್ನವೇ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಗಾಯಕ್ಕೆ ತುತ್ತಾಗಿದ್ದಾರೆ. ತೀವ್ರ ಗಾಯಕ್ಕೆ ತುತ್ತಾದ ಕಾರಣ ತಂಡದಿಂದಲೇ ಇವರು ಹೊರಬಿದ್ದಿದ್ದಾರೆ. ಗಾಯ ಮಾಡಿಕೊಂಡು ತಂಡದಿಂದ ಶಿವಂ ದುಬೆ ಹೊರನಡೆದಿದ್ದಾರೆ.
ಶಿವಂ ದುಬೆ ಬದಲಿಗೆ ನಿತೀಶ್ ಕುಮಾರ್ ರೆಡ್ಡಿ ಅಥವಾ ತಿಲಕ್ ವರ್ಮಾಗೆ ತಂಡದಲ್ಲಿ ಸ್ಥಾನ ಸಿಗಲಿದೆ. ತಿಲಕ್ ವರ್ಮಾ ಮುಂಬೈ ಇಂಡಿಯನ್ಸ್ ಪರ ಐಪಿಎಲ್ 2024ರಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಕಳೆದ ಆವೃತ್ತಿಯಲ್ಲಿ ಇವರು ಒಟ್ಟು 416 ರನ್ ಗಳಿಸಿದ್ದಾರೆ. ಇವರು ಭಾರತ ಪರ 16 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 336 ರನ್ ಗಳಿಸಿದ್ದಾರೆ. ಹಾಗಾಗಿ ಇವರಿಗೆ ಸ್ಥಾನ ನೀಡಬಹುದು.