ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಆಲಿ ಮಿಸ್ಸಿಂಗ್ ಪ್ರಕರಣದಲ್ಲಿ ಮಹಿಳೆ ಸೇರಿ ಆರು ಮಂದಿಯ ವಿರುದ್ದ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಹಿಳೆಯನ್ನು ಬಳಸಿಕೊಂಡು ದುರುದ್ದೇಶದಿಂದ ಆತ್ಮಹತ್ಯೆ ಪ್ರಚೋದನೆ ದೂರು ನೀಡಲಾಗಿದೆ. ಮುಮ್ತಾಜ್ ಆಲಿ ಸಹೋದರ ಹೈದರ್ ದೂರಿನ ಹಿನ್ನೆಲೆ ಮಹಿಳೆ ರೆಹಮತ್ ಹಾಗೂ ಅಬ್ದುಲ್ ಸತ್ತಾರ್, ಶಾಫಿ, ಮುಸ್ತಾಫ, ಶೋಯೆಬ್ ಹಾಗೂ ಸಿರಾಜ್ ವಿರುದ್ದ ಎಫ್ಐಆರ್ ದಾಖಲಾಗಿದೆ.
ಸಹೋದರ ಮುಮ್ತಾಜ್ ಆಲಿ ಸಮಾಜದ ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ಅವರ ಗೌರವ ಹಾಳು ಮಾಡಲು ಮಹಿಳೆಯ ಬಳಸಿಕೊಂಡು ಷಡ್ಯಂತ್ರ ಆರೋಪ ಮಾಡಲಾಗಿದೆ. ರೆಹಮತ್ ಅಕ್ರಮ ಸಂಬಂಧ ಇದೆ ಎಂದು ಸುಳ್ಳು ಪ್ರಚಾರದ ಬೆದರಿಕೆ ಹಾಕಿದ್ದಾರೆ. 2024ರ ಜುಲೈನಿಂದ ಈವರೆಗೆ 50 ಲಕ್ಷ ವಸೂಲಿ ಮಾಡಿದ್ದಾರೆ. 25 ಲಕ್ಷ ಹಣವನ್ನು ಚೆಕ್ ಮೂಲಕವೂ ಮಹಿಳೆ ಪಡೆದಿದ್ದಾಳೆ. ಸತ್ತಾರ್ ಎಂಬಾತ ಮುಮ್ತಾಜ್ ಆಲಿಯ ರಾಜಕೀಯ ವಿರೋಧಿಯಾಗಿದ್ದಾನೆ.
ಅಕ್ರಮ ಸಂಬಂಧ ಇದೆ ಎಂದು ಇವರು ನಿರಂತರ ಬ್ಲ್ಯಾಕ್ ಮೇಲ್ ಮಾಡಿದ್ದರು. ಜೀವ ಬೆದರಿಕೆ ಜೊತೆಗೆ ಮುಮ್ತಾಜ್ ಆಲಿ ಕುಟುಂಬಕ್ಕೂ ಬೆದರಿಸಿದ್ದರು. ಹೀಗಾಗಿಯೇ ಸಹೋದರ ಮುಮ್ತಾಜ್ ಆಲಿ ಮೆಸೇಜ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರು ನೀಡಿದ್ದಾರೆ.